ನಾರಾಯಣಪುರ: ಛತ್ತೀಸಗಢದ ನಾರಾಯಣಪುರ ಜಿಲ್ಲೆಯ ಗಣಿಯಿಂದ ಕಬ್ಬಿಣದ ಅದಿರನ್ನು ಸಾಗಿಸುತ್ತಿದ್ದ ನಾಲ್ಕು ಟ್ರಕ್‌ಗಳಿಗೆ ನಕ್ಸಲರು ಬೆಂಕಿ ಹಚ್ಚಿದ್ದಾರೆ.
ಛತ್ತೀಸಗಢ:ಕಬ್ಬಿಣದ ಅದಿರು ಸಾಗಿಸುತ್ತಿದ್ದ 4ಟ್ರಕ್‌ಗಳಿಗೆ ಬೆಂಕಿ ಹಚ್ಚಿದ ನಕ್ಸಲರು
0
ಮಾರ್ಚ್ 31, 2024
Tags
ನಾರಾಯಣಪುರ: ಛತ್ತೀಸಗಢದ ನಾರಾಯಣಪುರ ಜಿಲ್ಲೆಯ ಗಣಿಯಿಂದ ಕಬ್ಬಿಣದ ಅದಿರನ್ನು ಸಾಗಿಸುತ್ತಿದ್ದ ನಾಲ್ಕು ಟ್ರಕ್‌ಗಳಿಗೆ ನಕ್ಸಲರು ಬೆಂಕಿ ಹಚ್ಚಿದ್ದಾರೆ.
ಶನಿವಾರ ರಾತ್ರಿ ಘಟನೆ ನಡೆದಿದ್ದು, ಯಾವೊಬ್ಬ ವ್ಯಕ್ತಿಯೂ ಗಾಯಗೊಂಡಿಲ್ಲ. ಖಾಸಗಿ ಕಂಪನಿಯೊಂದಕ್ಕೆ ಮಂಜೂರಾದ ಆಮದಾಯಿ ಘಾಟಿ ಗಣಿಯಿಂದ ಕಬ್ಬಿಣದ ಅದಿರು ಸಾಗಿಸುತ್ತಿದ್ದ ನಾಲ್ಕು ಟ್ರಕ್‌ಗಳನ್ನು ಓರ್ಚಾ-ನಾರಾಯಣಪುರ ರಸ್ತೆಯ ಛೋಟೆಡೊಂಗರ್ ಪೊಲೀಸ್ ಠಾಣೆ ಬಳಿ ನಕ್ಸಲೀಯರು ತಡೆದಿದ್ದಾರೆ.
ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದರು. ಅಷ್ಟರಲ್ಲಿ ನಾಲ್ಕು ಟ್ರಕ್‌ಗಳು ಸುಟ್ಟು ಭಸ್ಮವಾಗಿದ್ದವು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಆಮದಾಯಿ ಘಾಟಿ ಗಣಿ ಯೋಜನೆಗೆ ನಕ್ಸಲೀಯರು ಬಹಳ ದಿನಗಳಿಂದ ವಿರೋಧ ವ್ಯಕ್ತಪಡಿಸುತ್ತಿದ್ದು, ಈ ಹಿಂದೆಯೂ ಕಾಮಗಾರಿಯಲ್ಲಿ ತೊಡಗಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.