ನವದೆಹಲಿ: ರಷ್ಯಾದ ಮಾಸ್ಕೋದಲ್ಲಿ ಉಗ್ರರು ನಡೆಸಿದ ದಾಳಿಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ.
ಮಾಸ್ಕೋದ ಅತೀ ದೊಡ್ಡ ಒಳಾಂಗಣ ಸಭಾಂಗಣವಾದ ಕ್ರಾಕಸ್ ಸಿಟಿ ಹಾಲ್‌ಗೆ (Crocus City Hall) ನುಗ್ಗಿದ ಶಸ್ತ್ರಸಜ್ಜಿತ ಉಗ್ರರ ಗುಂಡಿನ ದಾಳಿಯಿಂದ 60 ಜನ ಮೃತಪಟ್ಟಿದ್ದಾರೆ. ನೂರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಕ್ರಾಕಸ್ ಸಿಟಿ ಹಾಲ್‌ನಲ್ಲಿ ಶುಕ್ರವಾರ ರಾತ್ರಿ ಸಂಗೀತ ಕಛೇರಿ ನಡೆಯುತ್ತಿತ್ತು. ಸಾವಿರಕ್ಕೂ ಹೆಚ್ಚು ಜನ ಸೇರಿದ್ದರು. ಈ ವೇಳೆ ಏಕಾಏಕಿ ಹಾಲ್ ಒಳಗೆ ನುಗ್ಗಿದ ಉಗ್ರರು ಮನಸೋಇಚ್ಚೆ ಗುಂಡು ಹಾರಿಸಿ ಅಮಾಯಕರನ್ನು ಹತ್ಯೆ ಮಾಡಿದ್ದಾರೆ. ಉಗ್ರರು ಸ್ಥಳದಿಂದ ಪರಾರಿಯಾಗಿದ್ದಾರೆ.