ನವದೆಹಲಿ: ಚುನಾವಣಾ ಬಾಂಡ್‌ಗಳ ಮೂಲಕ ದೇಣಿಗೆ ಪಡೆಯಲು ತನಿಖಾ ಸಂಸ್ಥೆಗಳಾದ ಜಾರಿ ನಿರ್ದೇಶನಾಲಯ(ಇ.ಡಿ) ಮತ್ತು ಸಿಬಿಐ ಅನ್ನು ಬಿಜೆಪಿ ದುರುಪಯೋಗಪಡಿಸಿಕೊಂಡಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.
ನವದೆಹಲಿ: ಚುನಾವಣಾ ಬಾಂಡ್‌ಗಳ ಮೂಲಕ ದೇಣಿಗೆ ಪಡೆಯಲು ತನಿಖಾ ಸಂಸ್ಥೆಗಳಾದ ಜಾರಿ ನಿರ್ದೇಶನಾಲಯ(ಇ.ಡಿ) ಮತ್ತು ಸಿಬಿಐ ಅನ್ನು ಬಿಜೆಪಿ ದುರುಪಯೋಗಪಡಿಸಿಕೊಂಡಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.
ಮಾಧ್ಯಮ ವರದಿಗಳನ್ನು ಉಲ್ಲೇಖಸಿ ಮಾತನಾಡಿದ ಅವರು, 'ಇದು ಹೆಚ್ಚಿನ ದೇಣಿಗೆ ಪಡೆಯುವುದಕ್ಕಾಗಿ ಮಾಡಿದ ಬ್ಲ್ಯಾಕ್‌ಮೇಲ್ ಅಥವಾ ಸುಲಿಗೆ ಅಥವಾ ಲೂಟಿಯೇ?
'ಸರ್ವಾಧಿಕಾರಿ ಮೋದಿ ಸರ್ಕಾರವು ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದೆ. ಆದರೆ ಅದು ಮಾತ್ರ ಕೇಂದ್ರ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಹಣ ಪಡೆಯುತ್ತಿದೆ' ಎಂದರು.
'ಪ್ರಜಾಪ್ರಭುತ್ವದ ಮೇಲೆ ಬಿಜೆಪಿಗೆ ನಂಬಿಕೆಯಿದ್ದರೆ ಪಕ್ಷದ ಹಣಕಾಸಿನ ಬಗ್ಗೆ ಸ್ವತಂತ್ರ ತನಿಖೆ ಮೂಲಕ ಶ್ವೇತಪತ್ರ ಹೊರಡಿಸಲಿ' ಎಂದು ಸವಾಲು ಹಾಕಿದರು.