ಚೆನ್ನೈ: ತಮಿಳುನಾಡಿನಲ್ಲಿ ಬಿಜೆಪಿ ಮತ್ತು ಪಟ್ಟಾಳಿ ಮಕ್ಕಳ್ ಕಚ್ಚಿ (ಪಿಎಂಕೆ) ಪಕ್ಷಗಳ ನಡುವಿನ ಸ್ಥಾನ ಹಂಚಿಕೆ ಅಂತಿಮಗೊಂಡಿದ್ದು ಪಿಎಂಕೆ 10 ಸ್ಥಾನಗಳಲ್ಲಿ ಸ್ಪರ್ಧೆ ಮಾಡಲಿದೆ.
ಈ ಬಗ್ಗೆ ಪಿಎಂಕೆ ಸಂಸ್ಥಾಪಕ, ಮುಖಂಡ ಎಸ್. ರಾಮದಾಸ್ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಅಣ್ಣಾಮಲೈ ಅವರು ಜಂಟಿ ಪತ್ರಿಕಾಗೋಷ್ಠಿ ನಡೆಸಿ ಸೀಟು ಹೊಂದಾಣಿಕೆ ಬಗ್ಗೆ ಮಾಹಿತಿ ನೀಡಿದರು.
ರಾಜ್ಯದಲ್ಲಿ ಏಪ್ರಿಲ್ 19ರಂದು ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಪಿಎಂಕೆ 10 ಸ್ಥಾನಗಳಲ್ಲಿ ಸ್ಪರ್ಧೆ ಮಾಡಲಿದೆ ಎಂದು ರಾಮದಾಸ್ ಘೋಷಣೆ ಮಾಡಿದರು. ಇದಕ್ಕೂ ಮುನ್ನ ಅಣ್ಣಾಮಲ್ಲೈ ಮತ್ತು ರಾಮದಾಸ್ ಹಲವು ಸುತ್ತಿನ ಮಾತುಕತೆ ನಡೆಸಿದ್ದರು.
ವಣ್ಣಿಯಾರ್ ಸಮುದಾಯದವರು ಹೆಚ್ಚಿರುವ ಉತ್ತರ ತಮಿಳುನಾಡಿನಲ್ಲಿ ಹೆಚ್ಚು ರಾಜಕೀಯ ಪ್ರಭಾವ ಹೊಂದಿರುವ ಪಿಎಂಕೆ ಸೋಮವಾರ ಬಿಜೆಪಿ ಮೈತ್ರಿಕೂಟ ಸೇರಿತ್ತು.