ಇಂದೋರ್: ಉಜ್ಜಯಿನಿಯ ಮಹಾಕಾಳೇಶ್ವರ ದೇಗುಲದಲ್ಲಿ ನಡೆದ ಬೆಂಕಿ ಅವಘಡ ನೋವುಂಟು ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಗಾಯಗೊಂಡವರ ಶೀಘ್ರ ಚೇತರಿಕೆಗೆ ಹಾರೈಸಿದ್ದಾರೆ.
ಇಂದೋರ್: ಉಜ್ಜಯಿನಿಯ ಮಹಾಕಾಳೇಶ್ವರ ದೇಗುಲದಲ್ಲಿ ನಡೆದ ಬೆಂಕಿ ಅವಘಡ ನೋವುಂಟು ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಗಾಯಗೊಂಡವರ ಶೀಘ್ರ ಚೇತರಿಕೆಗೆ ಹಾರೈಸಿದ್ದಾರೆ.
'ಘಟನೆಯಲ್ಲಿ ಗಾಯಗೊಂಡ 14 ಸಂತ್ರಸ್ತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಧಾನಿ ಮೋದಿಯವರು ಕರೆ ಮಾಡಿ ಗಾಯಗೊಂಡಿರುವವರ ವಿವರಗಳನ್ನು ಕೇಳಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ಫೋನ್ ಕರೆ ಮಾಡಿ ವಿಚಾರಿಸಿದ್ದಾರೆ' ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ತಿಳಿಸಿದ್ದಾರೆ.'
ಇಂದು ಮುಂಜಾನೆ 5.50ರ ಸುಮಾರಿಗೆ ದೇಗುಲದ ಗರ್ಭಗುಡಿಯಲ್ಲಿ ಬೆಂಕಿ ಅವಘಢ ಸಂಭವಿಸಿ, ಅರ್ಚಕರು ಹಾಗೂ ಸಹಾಯಕರು ಸೇರಿ ಒಟ್ಟು 14 ಮಂದಿ ಗಾಯಗೊಂಡಿದ್ದರು.