HEALTH TIPS

ಯಾವುದೇ ಶೀರ್ಷಿಕೆಯಿಲ್ಲ

Top Post Ad

Click to join Samarasasudhi Official Whatsapp Group

Qries

            ಅರುಣಾಚಲ ಪ್ರದೇಶ: ಈಶಾನ್ಯ ರಾಜ್ಯಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅರುಣಾಚಲ ಪ್ರದೇಶದಲ್ಲಿರುವ ಗಡಿ ಗ್ರಾಮಗಳನ್ನು ಕಾಂಗ್ರೆಸ್ ಕಳೆದ 60 ವರ್ಷಗಳಲ್ಲಿ ನಿರ್ಲಕ್ಷ್ಯ ಮಾಡಿತ್ತು ಎಂದು ಮೋದಿ ಆರೋಪಿಸಿದ್ದಾರೆ.

             ಕಾಂಗ್ರೆಸ್ ಗೆ ಕೇವಲ 2 ಲೋಕಸಭಾ ಕ್ಷೇತ್ರಗಳಿರುವ ಅರುಣಾಚಲ ಪ್ರದೇಶದಲ್ಲಿ ಯಾವುದೆ ರೀತಿಯ ಗಮನ ಕೊಡುವುದು ಬೇಕಾಗಿರಲಿಲ್ಲ ಎಂದು ಮೋದಿ ಆರೋಪಿಸಿದ್ದಾರೆ. “ಸೇಲಾ ಸುರಂಗವನ್ನು ಬಹಳ ಹಿಂದೆಯೇ ನಿರ್ಮಿಸಬಹುದಿತ್ತು. ಕಾಂಗ್ರೆಸ್ ಗಡಿ ಗ್ರಾಮಗಳನ್ನು ನಿರ್ಲಕ್ಷಿಸಿ ಅವರ ಭವಿಷ್ಯವನ್ನು ಅವರಿಗೇ ಬಿಟ್ಟಿತ್ತು ಎಂದು ಪ್ರಧಾನಿ ಹೇಳಿದರು.

             “ಆದರೆ ಅರುಣಾಚಲ ಪ್ರದೇಶದ ಗ್ರಾಮಗಳು ನನ್ನ ಪಾಲಿಗೆ ಅವು ದೇಶದ ಮೊದಲ ಹಳ್ಳಿಗಳು. ನಾವು ವೈಬ್ರೆಂಟ್ ವಿಲೇಜ್ ಕಾರ್ಯಕ್ರಮವನ್ನು ಪ್ರಾರಂಭಿಸಿದ್ದೇವೆ. ಅಲ್ಲಿ ರಸ್ತೆ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ' ಎಂದು ಮೋದಿ ಹೇಳಿದರು.

           ಗಡಿ ಪ್ರದೇಶಗಳಲ್ಲಿ ಕಾಂಗ್ರೆಸ್ ಮೂಲಸೌಕರ್ಯಗಳನ್ನು ನಿರ್ಮಿಸಲು ನಿರೀಕ್ಷಿಸಿದಾಗ, ಅದು ಭ್ರಷ್ಟಾಚಾರದಲ್ಲಿ ತೊಡಗಿತ್ತು ಮತ್ತು ಅದು ರಾಷ್ಟ್ರದ ಭದ್ರತೆಯನ್ನು ರಾಜಿ ಮಾಡಿಕೊಂಡಿತ್ತು ಎಂದು ಪ್ರಧಾನಿ ಹೇಳಿದರು. ಮೋದಿ ಸರ್ಕಾರ ಹಾಗೆ ಮಾಡುವುದಿಲ್ಲ. ರಾಷ್ಟ್ರೀಯ ಭದ್ರತೆ, ಮೂಲಸೌಕರ್ಯಗಳ ಅಗತ್ಯವನ್ನು ಮನಸ್ಸಿನಲ್ಲಿಟ್ಟುಕೊಳ್ಳುತ್ತದೆ” ಎಂದು ಪ್ರಧಾನಿ ಹೇಳಿದರು.

            "ಭಾರತದ ವ್ಯಾಪಾರ, ಪ್ರವಾಸೋದ್ಯಮ ಮತ್ತು ದಕ್ಷಿಣ ಏಷ್ಯಾ ಮತ್ತು ಪೂರ್ವ ಏಷ್ಯಾದೊಂದಿಗಿನ ಇತರ ಸಂಬಂಧಗಳಲ್ಲಿ ಈಶಾನ್ಯವು ಬಲವಾದ ಕೊಂಡಿಯಾಗಲಿದೆ ಎಂದು ಮೋದಿ ಇದೇ ವೇಳೆ ಹೇಳಿದ್ದಾರೆ.


Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries