ಕಾಸರಗೋಡು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇತೃತ್ವದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಪಡನ್ನದಲ್ಲಿ ನಡೆದ ಸಮಾರಂಭವನ್ನು ಕಾಞಂಗಾಡು ಪುರಸಭೆಯ ಅಧ್ಯಕ್ಷೆ ಕೆ ಸುಜಾತಾ ಉದ್ಘಾಟಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಛೇರಿಯ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಯಿತು. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ವಿ.ಎಸ್.ಶಿಮ್ನಾ ಅಧ್ಯಕ್ಷತೆ ವಹಿಸಿದ್ದರು.
ಕಾಞಂಗಾಡ್ ನಗರಸಭಾ ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷೆ ಪಿ.ಲತಾ, ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಪ್ರಭಾವತಿ, ಮಹಿಳಾ ರಕ್ಷಣಾಧಿಕಾರಿ ಪಿ.ಜ್ಯೋತಿ, ಐಸಿಡಿಎಸ್ ಕೋಶದ ಹಿರಿಯ ಅಧೀಕ್ಷಕ ವಿ.ಕೆ.ಅಮರನಾಥ ಭಾಸ್ಕರ್, ಕಾರ್ಯಕ್ರಮಾಧಿಕಾರಿ ಪಿ.ಸುಧಾ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕೆ.ರಜನಿ ಉಪಸ್ಥಿತರಿದ್ದರು. ಮಹಿಳೆಯರಿಗೆ ಶಿಕ್ಷಣ, ವೃತ್ತಿ ಕೌಶಲ್ಯ ಮತ್ತು ಲಿಂಗ ಸಮಾನತೆ ಕುರಿತು ಕುಟುಂಬಶ್ರೀ ತರಬೇತುದಾರೆ ಕೆ.ವಿ.ಪ್ರಸೀನಾ ಜಾಗೃತಿ ತರಗತಿ ನಡೆಸಿದರು. ಕಾರ್ಯಕ್ರಮದ ಅಂಗವಾಗಿ ಸಮಾಜಸೇವೆ, ಕ್ರೀಡೆ, ಸಾಹಿತ್ಯ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹನೀಯರು ಹಾಗೂ ಮಹಿಳೆಯರನ್ನು ಸನ್ಮಾನಿಸಲಾಯಿತು. ಐಸಿಡಿಎಸ್ ನ ಮಹಿಳೆಯರ ನೇತೃತ್ವದಲ್ಲಿ ವಿವಿಧ ಕಲಾ ಕಾರ್ಯಕ್ರಮಗಳನ್ನೂ ಆಯೋಜಿಸಲಾಗಿತ್ತು.