ನವದೆಹಲಿ: ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಸಿ.ಆರ್.ಕೇಶವನ್ ಅವರನ್ನು ಪಕ್ಷದ ರಾಷ್ಟ್ರೀಯ ವಕ್ತಾರರನ್ನಾಗಿ ನೇಮಕ ಮಾಡಿದ್ದಾರೆ.
ನವದೆಹಲಿ: ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಸಿ.ಆರ್.ಕೇಶವನ್ ಅವರನ್ನು ಪಕ್ಷದ ರಾಷ್ಟ್ರೀಯ ವಕ್ತಾರರನ್ನಾಗಿ ನೇಮಕ ಮಾಡಿದ್ದಾರೆ.
ದೇಶದ ಮೊದಲ ಗವರ್ನರ್ ಜನರಲ್ ಸಿ.ರಾಜಗೋಪಾಲಚಾರಿ ಅವರ ಮರಿಮೊಮ್ಮಗ ಹಾಗೂ ಈ ಹಿಂದೆ ತಮಿಳುನಾಡು ಕಾಂಗ್ರೆಸ್‌ನಲ್ಲಿದ್ದ ಕೇಶವನ್, ಕಳೆದ ವರ್ಷ ಕೇಸರಿ ಪಾಳಯಕ್ಕೆ ಸೇರಿದ್ದರು.
ಹಲವು ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಲೋಕಸಭೆ ಚುನಾವಣೆ ಉಸ್ತುವಾರಿ ಹಾಗೂ ಉಪ ಉಸ್ತುವಾರಿಗಳನ್ನೂ ಬಿಜೆಪಿ ನೇಮಕಮಾಡಿದೆ ಎಂದು ಸುದ್ದಿ ಸಂಸ್ಥೆ 'ಎಎನ್‌ಐ' ತಿಳಿಸಿದೆ.