ಚೆನ್ನೈ: ತಮಿಳುನಾಡು ನೂತನ ಸಚಿವರಾಗಿ ಡಿಎಂಕೆ ನಾಯಕ ಕೆ ಪೊನ್ಮುಡಿ ಅವರು ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದರು.
ಈ ಸಂಬಂಧ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿ ಛೀಮಾರಿ ಹಾಕಿದ ನಂತರ, ತಮಿಳುನಾಡು ರಾಜ್ಯಪಾಲ ಆರ್‌ಎನ್ ರವಿ ಅವರು ಇಂದು ರಾಜಭವನದಲ್ಲಿ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮತ್ತು ಅವರ ಕೆಲವು ಸಂಪುಟ ಸಹೋದ್ಯೋಗಿಗಳ ಸಮ್ಮುಖದಲ್ಲಿ ನಡೆದ ಸರಳ ಸಮಾರಂಭದಲ್ಲಿ ಪೊನ್ಮುಡಿ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಸಮಾರಂಭದ ನಂತರ ಮಾತನಾಡಿದ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು, ತಮಿಳುನಾಡು ಜನರ ಪರವಾಗಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿ “ಸಂವಿಧಾನದ ಸ್ಫೂರ್ತಿಯನ್ನು ಎತ್ತಿಹಿಡಿದು ಪ್ರಜಾಪ್ರಭುತ್ವ ಉಳಿಸಿದ್ದಕ್ಕಾಗಿ” ಧನ್ಯವಾದಗಳನ್ನು ಅರ್ಪಿಸಿದರು.
ಪ್ರಜಾಪ್ರಭುತ್ವವನ್ನು ಉಳಿಸಲು 2024 ರ ಲೋಕಸಭೆ ಚುನಾವಣೆ ನಿರ್ಣಾಯಕವಾಗಿದ್ದು, "ನಮ್ಮ ವೈಭವದ ರಾಷ್ಟ್ರವನ್ನು ಹಾಳುಮಾಡುವ ಬೆದರಿಕೆ ಹಾಕುವ ಫ್ಯಾಸಿಸ್ಟ್ ಶಕ್ತಿಗಳಿಂದ ಅಧಿಕಾರದ ಲಜ್ಜೆಗೆಟ್ಟ ದುರುಪಯೋಗವನ್ನು ತಡೆಯಲು ನಾವು ಶ್ರಮಿಸೋಣ" ಎಂದು ಸ್ಟಾಲಿನ್ ಹೇಳಿದ್ದಾರೆ.