ಗಢಿಚಿರೌಲಿ : ಪೊಲೀಸ್ ಮಾಹಿತಿದಾರನೆಂದು ಬುಡಕಟ್ಟು ಜನಾಂಗಕ್ಕೆ ಸೇರಿದ ವ್ಯಕ್ತಿಯೊಬ್ಬನನ್ನು ನಕ್ಸಲರು ಕೊಲೆ ಮಾಡಿದ ಘಟನೆ ಮಹಾರಾಷ್ಟ್ರದ ಗಢಿಚಿರೌಲಿಯಲ್ಲಿ ನಡೆದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಜಿಲ್ಲೆಯ ಅಹೇರಿ ತಾಲೂಕಿನ ಧಮ್‌ರಾಂಚ ಗ್ರಾಮದ ನಿವಾಸಿ ಅಶೋಕ್ ತಲಾಂದೆ ಅವರೇ ಕೊಲೆಗೀಡಾದವರು.
ಶುಕ್ರವಾರ ಬೆಳಿಗ್ಗೆ ರಸ್ತೆಯೊಂದರಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಮೃತದೇಹದ ಸಮೀಪ ನಕ್ಸಲ್ ಕರಪತ್ರ ಪತ್ತೆಯಾಗಿದೆ. ಕೊಲೆಯಾದ ವ್ಯಕ್ತಿ ಪೊಲೀಸ್ ಮಾಹಿತಿದಾರನಾಗಿದ್ದ ಎಂದು ಅದರಲ್ಲಿ ಬರೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಲೆಯಾದ ವ್ಯಕ್ತಿ ಪೊಲೀಸ್ ಮಾಹಿತಿದಾರನಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದು, ಅವರ ಕೊಲೆ ಹಿಂದಿನ ನೈಜ ಕಾರಣವನ್ನು ಪತ್ತೆ ಮಾಡಲಾಗುವುದು ಎಂದು ಹೇಳಿದ್ದಾರೆ.