ನವದೆಹಲಿ: ಇಡೀ ದೇಶವೇ ಬದಲಾವಣೆಯನ್ನು ತೀವ್ರವಾಗಿ ಬಯಸುತ್ತಿದೆ ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ನವದೆಹಲಿ: ಇಡೀ ದೇಶವೇ ಬದಲಾವಣೆಯನ್ನು ತೀವ್ರವಾಗಿ ಬಯಸುತ್ತಿದೆ ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಇಂದು ನಡೆದ ಸಿಡಬ್ಲ್ಯುಸಿ ಸಭೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆಗೆ ಪಕ್ಷದ ಪ್ರಣಾಳಿಕೆಗೆ ಅಂತಿಮ ರೂಪ ನೀಡಲಾಗಿದೆ.
ಸಿಡಬ್ಲ್ಯುಸಿ ಸಭೆಯ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಪಕ್ಷದ ಮುಖಂಡರಾದ ಕೆ.ಸಿ. ವೇಣುಗೋಪಾಲ್, ಜೈರಾಮ್ ರಮೇಶ್, ಪ್ರಣಾಳಿಕೆಗೆ ಪಕ್ಷದ ಅಧ್ಯಕ್ಷ ಖರ್ಗೆ ಅವರು ಅನುಮೋದನೆ ನೀಡಿದ ಬಳಿಕ ಬಿಡುಗಡೆ ದಿನಾಂಕವನ್ನು ಘೋಷಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಈ ಮೊದಲು ಸಿಡಬ್ಲ್ಯುಸಿ ಸಭೆಯಲ್ಲಿ ಮಾತನಾಡಿದ ಖರ್ಗೆ, ಇಡೀ ದೇಶವೇ ಬದಲಾವಣೆ ಬಯಸುತ್ತಿದೆ. ನಮ್ಮ ಪ್ರಣಾಳಿಕೆ ವಿವಿಧ ರಾಜ್ಯಗಳಲ್ಲಿ ವ್ಯಾಪಕ ಪ್ರಚಾರ ಗಿಟ್ಟಿಸುತ್ತದೆ ಎಂಬುದನ್ನು ಖಾತ್ರಿಪಡಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ದೇಶದ ಹಳ್ಳಿಗಳ ಮನೆ ಮನೆಗೂ ನಮ್ಮ ಭರವಸೆಗಳು ತಲುಪುವಂತೆ ನೋಡಿಕೊಳ್ಳಬೇಕು ಎಂದು ಹೇಳಿದ್ದಾರೆ.
ಪ್ರಣಾಳಿಕೆಯಲ್ಲಿ ನೀಡುವ ಭರವಸೆಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ. ಇದೇ ಕಾರಣಕ್ಕಾಗಿ 1926ರಿಂದ ಕಾಂಗ್ರೆಸ್‌ನ ಪ್ರಣಾಳಿಕೆಯನ್ನು 'ವಿಶ್ವಾಸ ಹಾಗೂ ಬದ್ಧತೆಯ ದಾಖಲೆ'ಯಾಗಿ ಪರಿಗಣಿಸಲಾಗಿದೆ ಎಂದು ಉಲ್ಲೇಖಿಸಿದ್ದಾರೆ.