HEALTH TIPS

ರಾಜ್ಯಸಭೆಗೆ ಮರು ಆಯ್ಕೆ: ಜೈಲಿನಿಂದ ಬಂದು ಪ್ರಮಾಣ ಸ್ವೀಕರಿಸಿದ ಸಂಜಯ್ ಸಿಂಗ್

             ವದೆಹಲಿ: ರಾಜ್ಯಸಭೆಗೆ ಮರು ಆಯ್ಕೆಯಾಗಿರುವ ಎಎಪಿ ಮುಖಂಡ ಸಂಜಯ್ ಸಿಂಗ್ ಅವರು ರಾಜ್ಯಸಭೆ ಸಭಾಪತಿ ಜಗದೀಪ್ ಧನಕರ್ ಅವರಿಂದ ಎರಡನೇ ಅವಧಿಗೆ ಮಂಗಳವಾರ ಪ್ರಮಾಣವಚನ ಸ್ವೀಕರಿಸಿದರು.

              ಸಂಸತ್ತಿನಲ್ಲಿರುವ ಧನಕರ್ ಅವರ ಕಚೇರಿಯಲ್ಲಿ ತಮ್ಮ ತಂದೆ, ತಾಯಿ, ಹೆಂಡತಿ, ಮಗ ಮತ್ತು ಮಗಳ ಸಮ್ಮುಖದಲ್ಲಿ ಸಂಜಯ್ ಸಿಂಗ್ ಅವರು ಪ್ರಮಾಣವಚನ ಪಡೆದುಕೊಂಡರು.

                   ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಹಗರಣದಲ್ಲಿನ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ಇ.ಡಿ) ಸಂಜಯ್ ಸಿಂಗ್‌ ಬಂಧನಕ್ಕೆ ಒಳಗಾಗಿದ್ದರು. ಈಗ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಹೀಗಾಗಿ, ತಿಹಾರ್ ಕಾರಾಗೃಹದಲ್ಲಿದ್ದ ಸಿಂಗ್ ಅವರನ್ನು ಸ್ಥಳೀಯ ನ್ಯಾಯಾಲಯದ ಆದೇಶದ ಮೇರೆಗೆ ಬಿಗಿ ಬಂದೋಬಸ್ತ್‌ನಲ್ಲಿ ಸಂಸತ್ತಿಗೆ ಕರೆತರಲಾಯಿತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries