ತಿರುವನಂತಪುರಂ: ಲಾರಿಯಿಂದ ಬಂಡೆ ಬಿದ್ದು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಖಾಸಗಿ ದಂತ ವೈದ್ಯಕೀಯ ಕಾಲೇಜಿನ ಅಂತಿಮ ವರ್ಷದ ಬಿಡಿಎಸ್ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ.
ಅಂತು ಬಿ.ಅಜಿಕುಮಾರ್ ಮೃತಪಟ್ಟ ದುರ್ದೈವಿ. ಇವರು ಕಾಲೇಜಿಗೆ ತೆರಳುತ್ತಿದ್ದಾಗ ನಗರದ ಹೊರವಲಯದಲ್ಲಿರುವ ಅವರ ಮನೆಯ ಬಳಿ ಲಾರಿಯಿಂದ ದೊಡ್ಡ ಬಂಡೆಯೊಂದು ಅವರ ದ್ವಿಚಕ್ರ ವಾಹನದ ಮೇಲೆ ಬಿದ್ದಿದೆ.
ಅಜಿಕುಮಾರ್ ಹೆಲ್ಮೆಟ್ ಧರಿಸಿದ್ದರೂ ಬಂಡೆಯಿಂದ ಅವರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ತಕ್ಷಣ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.