ಇಂಫಾಲ: ಸುಮಾರು ನಾಲ್ಕು ತಿಂಗಳ ಬಳಿಕ ರಾಜ್ಯದಲ್ಲಿ ನಿಧಾನವಾಗಿ ಶಾಂತಿ ಮರುಕಳಿಸುತ್ತಿದೆ ಎಂದು ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಸೋಮವಾರ ಹೇಳಿದ್ದಾರೆ.
ಇಂಫಾಲ: ಸುಮಾರು ನಾಲ್ಕು ತಿಂಗಳ ಬಳಿಕ ರಾಜ್ಯದಲ್ಲಿ ನಿಧಾನವಾಗಿ ಶಾಂತಿ ಮರುಕಳಿಸುತ್ತಿದೆ ಎಂದು ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಸೋಮವಾರ ಹೇಳಿದ್ದಾರೆ.
ವಿವಿಧ ಕಲ್ಯಾಣ ಯೋಜನೆಗಳನ್ನು ಜನರಿಗೆ ಹಂಚುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, 'ಶಾಂತಿ ಮರುಸ್ಥಾಪನೆಗಾಗಿ ನಾವು ಶ್ರಮಿಸುತ್ತಿದ್ದೇವೆ.
ಮಣಿಪುರದಲ್ಲಿ ನಡೆದ ಘಟನೆಯ ಬಗ್ಗೆ ಬೇಸರ ವ್ಯಕ್ತಪಡಿಸಿದ ಅವರು, 'ದುರದೃಷ್ಟಕರ ಸಂಗತಿಯೆಂದರೆ ಸರ್ಕಾರದ ಮೇಲೆ ಉದ್ದೇಶಪೂರ್ವಕ ದಾಳಿಗಳು ನಡೆಯುತ್ತವೆ ಎಂದು ನಾವು ನಿರೀಕ್ಷಿಸಿರಲಿಲ್ಲ. ಅದಾಗ್ಯೂ, ಅಹಿತಕರ ಘಟನೆ ನಡೆಯದಂತೆ ಸರ್ಕಾರ ಕ್ರಮವಹಿಸಿದೆ' ಎಂದರು.