ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಅವರು ಇದೇ 18ರಂದು ಕೊಯಮತ್ತೂರಿನಲ್ಲಿ ನಡೆಸಲಿರುವ ನಾಲ್ಕು ಕಿ.ಮೀ ರೋಡ್ ಶೋಗೆ ಕೆಲವು ಷರತ್ತುಗಳೊಂದಿಗೆ ಅನುಮತಿ ನೀಡುವಂತೆ ಮದ್ರಾಸ್ ಹೈಕೋರ್ಟ್, ಪೊಲೀಸರಿಗೆ ಸೂಚಿಸಿದೆ.
ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಅವರು ಇದೇ 18ರಂದು ಕೊಯಮತ್ತೂರಿನಲ್ಲಿ ನಡೆಸಲಿರುವ ನಾಲ್ಕು ಕಿ.ಮೀ ರೋಡ್ ಶೋಗೆ ಕೆಲವು ಷರತ್ತುಗಳೊಂದಿಗೆ ಅನುಮತಿ ನೀಡುವಂತೆ ಮದ್ರಾಸ್ ಹೈಕೋರ್ಟ್, ಪೊಲೀಸರಿಗೆ ಸೂಚಿಸಿದೆ.
ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಭದ್ರತಾ ಕಾರಣಗಳನ್ನು ನೀಡಿ ಪೊಲೀಸರು ಪ್ರಧಾನಿ ರೋಡ್ ಶೋಗೆ ಅನುಮತಿ ನಿರಾಕರಿಸಿದ್ದರು.
'ರಾಜಕೀಯ ಕಾರಣಕ್ಕಾಗಿ ರೋಡ್ ಶೋಗೆ ಅನುಮತಿ ನಿರಾಕರಿಸಲಾಗಿದೆ. ಇದು ಸಮಂಜಸವಲ್ಲ. ಸಂವಿಧಾನದ 19ನೇ ವಿಧಿಯಡಿ ಖಾತರಿಪಡಿಸಲಾಗಿರುವ ಮೂಲಭೂತ ಹಕ್ಕಿನ ಉಲ್ಲಂಘನೆಯಾಗುತ್ತದೆ' ಎಂದು ಅವರು ನ್ಯಾಯಾಲಯದ ಗಮನಕ್ಕೆ ತಂದರು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್. ಆನಂದ್ ವೆಂಕಟೇಶ್ ಅವರು, ಷರತ್ತುಗಳೊಂದಿಗೆ ಅನುಮತಿ ನೀಡುವಂತೆ ಆರ್.ಎಸ್.ಪುರಂ ವಲಯದ ಸಹಾಯಕ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಿದರು.