ತಿರುವನಂತಪುರಂ: ಬಿಸಿಲಿನ ತಾಪ ಶಮನಗೊಳಿಸಲು ಮಳೆ ಬರುತ್ತಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇಂದು ಮತ್ತು ನಾಳೆ ಆಲಪ್ಪುಳ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ.
ಆರು ಜಿಲ್ಲೆಗಳಲ್ಲಿ ಅಧಿಕ ತಾಪಮಾನದ ಎಚ್ಚರಿಕೆಯನ್ನೂ ನೀಡಲಾಗಿದೆ.
ಪಾಲಕ್ಕಾಡ್, ಕೊಲ್ಲಂ, ಕೊಟ್ಟಾಯಂ, ಕೋಝಿಕ್ಕೋಡ್, ತ್ರಿಶೂರ್ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಅಧಿಕ ತಾಪಮಾನದ ಎಚ್ಚರಿಕೆ ನೀಡಲಾಗಿದೆ. ಎಲ್ಲಾ ಆರು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ತಾಪಮಾನ ಸಾಮಾನ್ಯಕ್ಕಿಂತ ಎರಡರಿಂದ ನಾಲ್ಕು ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆ ಇದೆ. ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.