ನವದೆಹಲಿ: ಬಾಲಿವುಡ್‌ನ ಖ್ಯಾತ ಗಾಯಕಿ ಅನುರಾಧಾ ಪೌಡ್ವಾಲ್ ಅವರು ಶನಿವಾರ ಬಿಜೆಪಿ ಸೇರ್ಪಡೆಯಾದರು.
ಬಿಜೆಪಿ ಕೇಂದ್ರ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಶ್ಲಾಘಿಸಿದರು. ಮೋದಿ ನೇತೃತ್ವದ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವುದು ಸಂತಸ ತಂದಿದೆ ಎಂದು ಹೇಳಿದರು.
'ಸರ್ವ ಮಂಗಳ ಮಾಂಗಲ್ಯೆ' ಹಾಡನ್ನು ಹಾಡುವ ಮೂಲಕ ಆದಿಶಕ್ತಿಗೆ ನಮಸ್ಕರಿಸಿದರು.
'ಸನಾತನ ಧರ್ಮದೊಂದಿಗೆ ಆಳವಾದ ಸಂಬಂಧ ಹೊಂದಿರುವ ಸರ್ಕಾರ ಮತ್ತು ಜನರಿರುವ ಪಕ್ಷಕ್ಕೆ ಸೇರುತ್ತಿರುವುದು ಸಂತಸ ತಂದಿದೆ. ಸಿನಿಮಾ ಕ್ಷೇತ್ರದಲ್ಲಿ ಹಿನ್ನೆಲೆ ಗಾಯಕಿ ನನ್ನ ಕೆಲಸ ಕಡಿಮೆಯಾದ ನಂತರ ಹೆಚ್ಚಾಗಿ ಭಕ್ತಿಗೀತೆಗಳನ್ನು ಹಾಡುತ್ತಿದ್ದೇನೆ' ಎಂದರು.
'ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಸರಿಯಾದ ದಿಕ್ಕಿನಲ್ಲಿ ಕೊಂಡೊಯ್ಯುತ್ತಿದ್ದಾರೆ' ಎಂದು ಪ್ರಶಂಸಿಸಿದರು.
ಈ ಸಂದರ್ಭದಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಮತ್ತು ಮುಖ್ಯ ವಕ್ತಾರ ಅನಿಲ್ ಬಲೂನಿ ಮತ್ತು ಇತರರು ಇದ್ದರು.