ಅಮೇಥಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರು ಅಮೇಠಿ ಕ್ಷೇತ್ರದಿಂದಲೇ ಸ್ಪರ್ಧಿಸಲಿದ್ದಾರೆ ಎಂದು ಉತ್ತರ ಪ್ರದೇಶದ ಕಾಂಗ್ರೆಸ್ ನಾಯಕರೊಬ್ಬರು ಹೇಳಿಕೆ ನೀಡಿದ್ದಾರೆ.
ಅಮೇಥಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರು ಅಮೇಠಿ ಕ್ಷೇತ್ರದಿಂದಲೇ ಸ್ಪರ್ಧಿಸಲಿದ್ದಾರೆ ಎಂದು ಉತ್ತರ ಪ್ರದೇಶದ ಕಾಂಗ್ರೆಸ್ ನಾಯಕರೊಬ್ಬರು ಹೇಳಿಕೆ ನೀಡಿದ್ದಾರೆ.
ಅಮೇಠಿ ಲೋಕಸಭಾ ಕ್ಷೇತ್ರವನ್ನು ಹಲವು ಬಾರಿ ಪ್ರತಿನಿಧಿಸಿದ್ದ ರಾಹುಲ್ ಗಾಂಧಿ, ಅದೇ ಕ್ಷೇತ್ರದಿಂದ ಮತ್ತೆ ಕಣಕ್ಕಿಳಿಯಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಪ್ರದೀಪ್ ಸಿಂಘಾಲ್ ಹೇಳಿದ್ದಾರೆ.
ದೆಹಲಿಯಲ್ಲಿ ನಡೆದ ಸಭೆಯ ಬಳಿಕ ನಗರಕ್ಕೆ ಮರಳಿದ ಪ್ರದೀಪ್, ಈ ಕುರಿತು ಶೀಘ್ರದಲ್ಲೇ ಘೋಷಣೆ ಮಾಡಲಾಗುವುದು ಎಂದು ಹೇಳಿದರು.
ಆದರೆ ಈ ಕುರಿತು ಪಕ್ಷದ ಕೇಂದ್ರ ನಾಯಕರು ಯಾವುದೇ ಸ್ಪಷ್ಟನೆ ನೀಡಿಲ್ಲ. ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಸಮಿತಿ ಸಭೆ ಇನ್ನಷ್ಟೇ ನಡೆಯಬೇಕಿದೆ.
2002ರಿಂದ 2019ರವರೆಗೆ ಅಮೇಠಿ ಲೋಕಸಭಾ ಕ್ಷೇತ್ರವನ್ನು ರಾಹುಲ್ ಗಾಂಧಿ ಪ್ರತಿನಿಧಿಸಿದ್ದರು. ಆದರೆ ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನಾಯಕಿ ಸ್ಮೃತಿ ಇರಾನಿ ವಿರುದ್ಧ ಪರಾಭವಗೊಂಡಿದ್ದರು.
2019ರಲ್ಲಿ ಕೇರಳದ ವಯನಾಡು ಕ್ಷೇತ್ರದಿಂದಲೂ ಸ್ಪರ್ಧಿಸಿದ್ದ ರಾಹುಲ್ ಗಾಂಧಿ, ಸಂಸದರಾಗಿ ಆಯ್ಕೆಯಾಗಿದ್ದರು.