ತಿರುವನಂತಪುರ: ಕೇರಳಕ್ಕೆ ಇಡಿ ಬಂದರೂ ಏನೂ ಆಗುವುದಿಲ್ಲ ಎಂದು ಸಚಿವ ಮುಹಮ್ಮದ್ ರಿಯಾಝ್ ಹೇಳಿದ್ದಾರೆ.
ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರುವ ಹಿನ್ನೆಲೆಯಲ್ಲಿ ಪಿಣರಾಯಿ ವಿಜಯನ್ ವಿರುದ್ಧದ ಆರೋಪಗಳ ಕುರಿತು ಅವರು ಪ್ರತಿಕ್ರಿಯಿಸಿದರು.
ಪಿಣರಾಯಿ ವಿಜಯನ್ ಕೂಡ ಕೇಜ್ರಿವಾಲ್ ರೀತಿ ಸಿಕ್ಕಿ ಬೀಳಲಿದ್ದಾರೆ ಎಂದು ಬಿಜೆಪಿ ಪ್ರತಿಕ್ರಿಯಿಸಿದೆ. ಆದರೆ ಯಾವುದೂ ಫಲಕಾರಿಯಾಗದು’ ಎಂದು ಸಚಿವ ರಿಯಾಜ್ ಉತ್ತರಿಸಿದರು. ಈ ವಿಚಾರದಲ್ಲಿ ಕಾಂಗ್ರೆಸ್ ದ್ವಂದ್ವ ನಿಲುವು ಹೊಂದಿದೆ ಎಂದು ರಿಯಾಜ್ ಪ್ರತಿಕ್ರಿಯಿಸಿದ್ದಾರೆ. ಇದೇ ವೇಳೆ ರಿಯಾಜ್ ಉದ್ದೇಶವೇ ಬೇರೆ ಎಂದು ಬಿಜೆಪಿ ನಾಯಕರು ಪ್ರತಿಕ್ರಿಯಿಸಿದ್ದಾರೆ.