ಕೋಝಿಕ್ಕೋಡ್: ವಡಕರ ಡಿವೈಎಸ್ಪಿ ಕಚೇರಿ ಎದುರು ವಾಹನಕ್ಕೆ ಬೆಂಕಿ ಹಚ್ಚಿದ ಘಟನೆ ನಡೆದಿದೆ. ಭಾನುವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಘಟನೆ ನಡೆದಿದೆ.
ಯಾರೋ ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಿದ್ದಾರೆ ಎಂದು ಪೋಲೀಸರು ಶಂಕಿಸಿದ್ದಾರೆ.
ಶನಿವಾರ ರಾತ್ರಿ ವಡಕರದಲ್ಲಿ ಮುಸ್ಲಿಂ ಲೀಗ್ ಮುಖಂಡನ ಗೋಣಿಚೀಲದ ಅಂಗಡಿಗೆ ಬೆಂಕಿ ಹಚ್ಚುವ ಯತ್ನ ನಡೆದಿತ್ತು. ಘಟನೆಗೆ ಸಂಬಂಧಿಸಿದಂತೆ ಓರ್ವ ವ್ಯಕ್ತಿ ಪೋಲೀಸ್ ವಶದಲ್ಲಿದ್ದಾರೆ. ಏತನ್ಮಧ್ಯೆ, ಎರಡು ಘಟನೆಗಳ ನಡುವೆ ಯಾವುದಾದರೂ ಸಂಬಂಧವಿದೆಯೇ ಎಂದು ಪೋಲೀಸರು ಖಚಿತಪಡಿಸಿಲ್ಲ.