ನವದೆಹಲಿ: ವಿಶ್ವದ ಮಹತ್ವದ ಕ್ರೀಡಾಕೂಟ ಪ್ಯಾರಿಸ್ ಒಲಿಂಪಿಕ್ಸ್ ಆರಂಭಕ್ಕೆ ಮುಹೂರ್ತ ನಿಗದಿಯಾಗಿದ್ದು, ಜುಲೈ 26ರಂದು ಉದ್ಘಾಟನೆ ನನೆರವೇರಲಿದೆ. ಇದೇ ಮೊದಲ ಬಾರಿಗೆ ಉದ್ಘಾಟನೆಯು ಕ್ರೀಡಾಂಗಣದ ಹೊರಗಡೆ ಉದ್ಘಾಟನೆ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಜುಲೈ 06ರಂದು ಸೀನ್ ನದಿಯಲ್ಲಿ ಸಂಜೆ 7.30ಕ್ಕೆ ಅದ್ಧೂರಿ ಕಾರ್ಯಕ್ರಮ ನೆರವೇರಲಿದೆ. 10,500ಕ್ಕೂ ಹೆಚ್ಚು ಅಥ್ಲೀಟ್‌ಗಳು ಪ್ಯಾರಿಸ್‌ನಿಂದ ಸುಮಾರು 6 ಕಿಲೋಮೀಟರ್ ವರೆಗೆ ಬೋಟ್‌ಗಳಲ್ಲೇ ಪರೇಡ್ ನಡೆಸಲಿದ್ದಾರೆ ಎಂದು ಆಯೋಜಕರು ಮಾಹಿತಿ ನೀಡಿದ್ದಾರೆ.
ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಆತಿಥ್ಯದಲ್ಲಿ ನಡೆಯುತ್ತಿರುವ ಮೂರನೇ (1900 ಮತ್ತು 1924ರ ನಂತರ) ಟೂರ್ನಿ ಇದಾಗಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಆಯೋಜಿಸಲಾಗಿದೆ. ಗೇಮ್ಸ್‌ಗಾಗಿಯೇ ಇಲ್ಲಿನ ಸೀನ್ ನದಿಯನ್ನು ಸಾರ್ವಜನಿಕ ನಿಧಿಯಿಂದ ಈ ನದಿಯನ್ನು ಸ್ವಚ್ಛ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಕಳೆದ ವಾರ ಕ್ರೀಡಾಪಟುಗಳು ಉಳಿದುಕೊಳ್ಳಲು ನಿರ್ಮಿಸಲಾಗಿರುವ ಕ್ರೀಡಾಗ್ರಾಮವನ್ನು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮಾಕ್ರನ್ ಅವರು ಪರಿಶೀಲಿಸಿದ್ದರು. ಈ ವೇಳೆ ಅವರು ಸೀನ್ ನದಿ ಸ್ವಚ್ಛಗೊಂಡಿದ್ದು, ತಾನು ಕೂಡ ಈ ನದಿಯಲ್ಲಿ ಈಜುವುದಾಗಿ ಭರವಸೆ ನೀಡಿದ್ದರು.