ಮುಂಬೈ: ವಿಮಾನ ಪ್ರಯಾಣದ ವೇಳೆ ಬೀಡಿ ಸೇದಿದ ವ್ಯಕ್ತಿಯನ್ನು ನಗರದ ಛತ್ರಪತಿ ಶಿವಾಜಿ ಮಹಾರಾಜ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಂಬೈ: ವಿಮಾನ ಪ್ರಯಾಣದ ವೇಳೆ ಬೀಡಿ ಸೇದಿದ ವ್ಯಕ್ತಿಯನ್ನು ನಗರದ ಛತ್ರಪತಿ ಶಿವಾಜಿ ಮಹಾರಾಜ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಯನ್ನು 42 ವರ್ಷದ ಮೊಹಮ್ಮದ್ ಫಕ್ರುದ್ದೀನ್ ಎಂದು ಗುರುತಿಸಲಾಗಿದೆ.
ಕೂಡಲೇ ವಿಮಾನ ಸಿಬ್ಬಂದಿ ಕ್ರಮ ತೆಗೆದುಕೊಂಡಿದ್ದು, ಲ್ಯಾಂಡ್ ಆದ ಬಳಿಕ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 336 ಮತ್ತು ಏರ್‌ಕ್ರಾಫ್ಟ್ ಆಕ್ಟ್‌ನ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಇದೇ ರೀತಿಯ ಘಟನೆಯಲ್ಲಿ 2023ರ ಮೇ ತಿಂಗಳಲ್ಲಿ ವಿಮಾನದಲ್ಲಿ ಬೀಡಿ ಸೇದುತ್ತಿದ್ದ 56 ವರ್ಷದ ವ್ಯಕ್ತಿಯನ್ನು ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು.