ಬದಿಯಡ್ಕ: ಕುಂಬ್ಡಾಜೆ ಪಂಚಾಯಿತಿ ಮುನಿಯೂರು ಮುನಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಗರ್ಭಗುಡಿ ಹಾಗೂ ತೀರ್ಥಮಂಟಪದ ಮಹಡಿಗೆ ತಾಮ್ರ ಹೊದಿಸುವ ಕಾರ್ಯದ ಆರಂಭೋತ್ಸವ, ಧಾರ್ಮಿಕ ಸಭಾ ಕಾರ್ಯಕ್ರಮ ಮಾ 22ರಂದು ಬೆಳಗ್ಗೆ 10ಕ್ಕೆ ನಡೆಯುವುದು.
ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಜಯದೇವ ಖಂಡಿಗೆ ಸಮಾರಂಭ ಉದ್ಘಾಟಿಸುವರು. ದೇವಸ್ತನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶಂಕರನಾರಾಯಣ ಮಯ್ಯ ಅಧ್ಯಕ್ಷತೆ ವಹಿಸುವರು.