ನವದೆಹಲಿ: ಪೃಥ್ವಿರಾಜ್ ಸುಕುಮಾರ್ ನಟನೆಯ ಬ್ಲೆಸ್ಸಿ ನಿರ್ದೇಶನದ ಆಡುಜೀವಿತಂ ಚಿತ್ರವು ಮಾರ್ಚ್ 28ರಂದು ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ ಉತ್ತಮ ರೆಸ್ಪಾನ್ಸ್ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಸಿನಿಮಾಗೆ ಬುಕ್ ಮೈ ಶೋನಲ್ಲಿ 9.5 ರೇಟಿಂಗ್ ದೊರೆತ್ತಿದ್ದು, ಬಾಕ್ಸ್ ಆಫೀಸ್ನಲ್ಲಿ ಉತ್ತಮ ಗಳಿಕೆ ಕಾಣುತ್ತಿದೆ.
ಮಾರ್ಚ್ 28ರಂದು ಬಿಡುಗಡೆಯಾ ಚಿತ್ರವು ಮೊದಲ ದಿನ 7.60 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಎರಡನೇ ದಿನ ಚಿತ್ರದ ಗಳಿಕೆ 6.50 ಕೋಟಿ ರೂಪಾಯಿ ಆಗಿದೆ. ಈ ಮೂಲಕ ಎರಡು ದಿನದಲ್ಲಿ ಒಟ್ಟಾರೆ ಕಲೆಕ್ಷನ್ 14.10 ಕೋಟಿ ರೂಪಾಯಿ ದಾಟಿದೆ. ಮಾಲಿವುಡ್ನಲ್ಲಿ 11.82 ಕೋಟಿ ರೂಪಾಯಿ ಗಳಿಕೆಯಾಗಿದ್ದು ಕನ್ನಡದಲ್ಲಿ 90 ಲಕ್ಷ ರೂಪಾಯಿ ಕಲೆಕ್ಷನ್ ಆಗಿದೆ.
ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಬ್ಲೆಸ್ಸಿ ನಿರ್ದೇಶನದ ಆಡುಜೀವಿತಂ ಚಿತ್ರವು ಕೆಲಸ ಅರಸಿ ಸೌದಿ ಅರೇಬಿಯಾಗೆ ವಲಸೆ ಹೋಗುವ ನಸೀಬ್ ಮೊಹಮ್ಮದ್ ಎನ್ನುವ ಕೇರಳದ ವ್ಯಕ್ತಿ ಆಧರಿಸಿ ಮಾಡಿರುವ ಸಿನಿಮಾ ಆಗಿದೆ. 2008ರಲ್ಲಿ ಬೆನ್ಯಾಮಿನ್ ಬರೆದ ಅದೇ ಹೆಸರಿನ ಮಲಯಾಳಂ ಕಾದಂಬರಿ ಆಧರಿಸಿ ಆಡುಜೀವಿತಂ ಚಿತ್ರ ಮಾಡಲಾಗಿದೆ.