ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸಲು ಅಧಿಸೂಚನೆಯನ್ನು ಹೊರಡಿಸಿದ ನಂತರ, ಕೇಂದ್ರವು ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಲು ವೆಬ್‍ಸೈಟ್ ಅನ್ನು ಸ್ಥಾಪಿಸಿದೆ.
ಸ್ವಂತ ಮೊಬೈಲ್ ಸಂಖ್ಯೆ ಮತ್ತು ಇ-ಮೇಲ್ ಕಡ್ಡಾಯವಾಗಿದೆ. ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿ ಮತ್ತು ನಿಗದಿತ ಶುಲ್ಕವನ್ನು ಪಾವತಿಸಬೇಕು.
https://indiancitizenshiponline.nic.in/ ಎಂಬ ವೆಬ್‍ಸೈಟ್‍ನಲ್ಲಿ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಿ.
ಭಾರತದಲ್ಲಿರುವವರು ಆನ್‍ಲೈನ್‍ನಲ್ಲಿ ಸಲ್ಲಿಸಿದ ಅರ್ಜಿಯ ಪ್ರತಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಬೇಕು. ಭಾರತದ ಹೊರಗಿನವರು ಭಾರತದ ಕಾನ್ಸುಲರ್ ಜನರಲ್‍ಗೆ ಅರ್ಜಿ ಸಲ್ಲಿಸಬೇಕು. ಅರ್ಜಿಯನ್ನು ಕೂಲಂಕಷವಾಗಿ ಪರಿಶೀಲಿಸಿದ ನಂತರ, ಅರ್ಜಿದಾರರು ಪರಿಶೀಲನೆಗಾಗಿ ಅರ್ಜಿಯೊಂದಿಗೆ ಲಗತ್ತಿಸಲಾದ ಎಲ್ಲಾ ದಾಖಲೆಗಳ ಮೂಲಗಳೊಂದಿಗೆ ಖುದ್ದಾಗಿ ಹಾಜರಾಗಬೇಕು. ದಿನಾಂಕ ಮತ್ತು ಸಮಯವನ್ನು ಇ-ಮೇಲ್Éಸ್.ಎಂ.ಎಸ್. ಮೂಲಕ ಅರ್ಜಿದಾರರಿಗೆ ತಿಳಿಸಲಾಗುತ್ತದೆ.
ಇದು ಭಾರತದ ಲಕ್ಷಾಂತರ ನಿರಾಶ್ರಿತರಿಗೆ ಸಹಾಯ ಮಾಡುವ ಕ್ರಮವಾಗಿದೆ. ಈ ತಿದ್ದುಪಡಿಯು ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ಭಾರತಕ್ಕೆ ಬಂದ ಅಲ್ಪಸಂಖ್ಯಾತರಿಗೆ ಪೌರತ್ವವನ್ನು ನೀಡುತ್ತದೆ. ಇದರ ವಿರುದ್ಧ ಅನಾವಶ್ಯಕವಾಗಿ ಪ್ರತಿಭಟನೆ ಮಾಡುವ ಮೂಲಕ ಜನರಲ್ಲಿ ಒಡಕು ಮೂಡಿಸುವ ಪ್ರಯತ್ನಗಳು ನಡೆಯುತ್ತಿವೆ ಎಂಬ ಬಲವಾದ ಆರೋಪವೂ ಕೇಳಿ ಬರುತ್ತಿದೆ.
ವೆಬ್ ಪೋರ್ಟಲ್ ಲಿಂಕ್:indiancitizenshiponline.nic.in
ಶೀಘ್ರದಲ್ಲೇ ಮೊಬೈಲ್ ಆಯಪ್:
ಶೀಘ್ರದಲ್ಲೇ 'CAA-2019' ಮೊಬೈಲ್ ಆಯಪ್ ಅನ್ನು ಕೂಡ ಬಿಡುಗಡೆ ಮಾಡುವುದಾಗಿ ತಿಳಿಸಲಾಗಿದೆ.
ಈ ಕಾಯ್ದೆಯು ಯಾವುದೇ ದಾಖಲೆಗಳು ಇಲ್ಲದೆ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಗಾನಿಸ್ತಾನದಿಂದ 2014ರ ಡಿಸೆಂಬರ್ 31ಕ್ಕೆ ಮೊದಲು ಭಾರತ ಪ್ರವೇಶಿಸಿದ ಮುಸ್ಲಿಮೇತರರಿಗೆ ಭಾರತದ ಪೌರತ್ವವನ್ನು ನೀಡುತ್ತದೆ. ಈ ಮೂರು ದೇಶಗಳಲ್ಲಿ ದೌರ್ಜನ್ಯಕ್ಕೆ ಗುರಿಯಾಗಿ ಭಾರತಕ್ಕೆ ಬಂದ ಹಿಂದೂ, ಸಿಖ್, ಜೈನ, ಬೌದ್ಧ, ಪಾರ್ಸಿ ಮತ್ತು ಕ್ರೈಸ್ತ ಸಮುದಾಯದವರಿಗೆ ಭಾರತದ ಪೌರತ್ವವನ್ನು ನೀಡಲಿದೆ.