ಮಾಸ್ಕೊ: ಮಾಸ್ಕೊದ ಕ್ರಾಕಸ್ ಸಿಟಿ ಹಾಲ್ ಸಭಾಂಗಣದ ಮೇಲೆ ಈಚೆಗೆ ನಡೆದ ದಾಳಿಯ ಹೊಣೆಯನ್ನು ಐಎಸ್ (ಇಸ್ಲಾಮಿಕ್ ಸ್ಟೇಟ್) ಸಂಘಟನೆ ಹೊಣೆ ಹೊತ್ತುಕೊಂಡಿದೆ. ಆದರೆ, ಈ ದಾಳಿಗೆ ಉಕ್ರೇನ್ ಪ್ರಚೋದನೆಯೇ ಪ್ರಮುಖ ಕಾರಣ ಎಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಆರೋಪಿಸಿದ್ದಾರೆ.

ನಮ್ಮ ದೇಶದಲ್ಲಿ ದಾಳಿಯನ್ನು ನಡೆಸುವ ಮೂಲಕ ಆತಂಕ ಸೃಷ್ಟಿಸುವುದು ಉಗ್ರರ ಉದ್ದೇಶವಾಗಿತ್ತು. ಆದರೆ, ನಾವು ಏಕತೆಯಿಂದ ಎದುರಿಸಲು ಸಿದ್ಧರಿದ್ದೇವೆ ಎಂದು ಪುಟಿನ್ ಹೇಳಿದ್ದಾರೆ.
ಮಾಸ್ಕೊದಲ್ಲಿ ಸಂಗೀತ ಕಾರ್ಯಕ್ರಮವೊಂದು ನಡೆಯಬೇಕಿದ್ದ ಕ್ರಾಕಸ್ ಸಿಟಿ ಹಾಲ್ ಸಭಾಂಗಣದ ಮೇಲೆ ಶುಕ್ರವಾರ ತಡರಾತ್ರಿ ನಡೆದ ದಾಳಿಯಲ್ಲಿ ಕನಿಷ್ಠ 140ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು. ಘಟನೆಗೆ ಸಂಬಂಧಿಸಿದಂತೆ ರಷ್ಯಾದ ಅಧಿಕಾರಿಗಳು 11 ಮಂದಿಯನ್ನು ವಶಕ್ಕೆ ತೆಗೆದುಕೊಂಡಿದ್ದರು.
ಶಂಕಿತರ ಪೈಕಿ ನಾಲ್ಕು ಮಂದಿ ದಾಳಿಯಲ್ಲಿ ನೇರವಾಗಿ ಭಾಗಿಯಾಗಿದ್ದರು ಎಂದು ರಷ್ಯಾದ ತನಿಖಾ ಸಮಿತಿ ಹೇಳಿತ್ತು. ದಾಳಿಗೆ ತಾನು ಹೊಣೆ ಎಂದು ಇಸ್ಲಾಮಿಕ್ ಸ್ಟೇಟ್ ಸಂಘಟನೆ ಹೇಳಿಕೊಂಡಿದೆ. ಆದರೆ ದಾಳಿಗೆ ಉಕ್ರೇನ್ ನಂಟು ಇದೆ ಎಂಬ ಅರ್ಥದ ಮಾತುಗಳನ್ನು ರಷ್ಯಾದ ತನಿಖಾ ಸಂಸ್ಥೆಗಳು ಹೇಳಿವೆ.