HEALTH TIPS

ಮಧ್ಯಪ್ರದೇಶ: ವಿವಾದಿತ ಭೋಜಶಾಲ ಸಂಕೀರ್ಣದಲ್ಲಿ ಪುರಾತತ್ವ ಇಲಾಖೆಯಿಂದ ಸಮೀಕ್ಷೆ ಪ್ರಾರಂಭ

           ಧಾರ್: ಮಧ್ಯಪ್ರದೇಶದ ಬುಡಕಟ್ಟು ಪ್ರಾಬಲ್ಯದ ಧಾರ್ ಜಿಲ್ಲೆಯಲ್ಲಿರುವ ವಿವಾದಿತ ಭೋಜಶಾಲ/ ಕಮಲ್ ಮೌಲಾ ಮಸೀದಿ ಸಂಕೀರ್ಣದ ಸಮೀಕ್ಷೆ ಕಾರ್ಯವನ್ನು ಭಾರತೀಯ ಪುರಾತತ್ವ ಇಲಾಖೆಯ ತಂಡವೊಂದು ಪ್ರಾರಂಭಿಸಿದೆ. ಡಜನ್ ಗೂ ಅಧಿಕ ಮಂಡಿಯ ಪುರಾತತ್ವ ಇಲಾಖೆಯ ತಂಡ ಬೆಳಗ್ಗೆ ಸ್ಥಳಕ್ಕೆ ಆಗಮಿಸಿತು. ಸ್ಥಳೀಯ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಜಿಲ್ಲಾಡಳಿತ ಅಧಿಕಾರಿಗಳು ಅವರಿಗೆ ಸಾಥ್ ನೀಡಿದರು.

           ಭೋಜಶಾಲದಲ್ಲಿ ಸಮೀಕ್ಷೆ ಆರಂಭವಾಗಿದೆ. ಸಮೀಕ್ಷೆ ನಡೆಸಲು ಪುರಾತತ್ವ ಇಲಾಖೆಗೆ ಬೇಕಾದ ಎಲ್ಲಾ ಸಹಕಾರವನ್ನು ನಾವು ನೀಡಿದ್ದೇವೆ. ಸ್ಥಳದಲ್ಲಿ ಶಾಂತಿ ಭಂಗವಾಗದಂತೆ ಅಗತ್ಯ ಭದ್ರತೆಯನ್ನು ಕಲ್ಪಿಸಲಾಗಿದೆ ಎಂದು ಧಾರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ಸಿಂಗ್ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

            ಸಮೀಕ್ಷೆ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಭಾರಿ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ. ಆರು ವಾರದೊಳಗೆ ಭೋಜಶಾಲ ಆವರಣದಲ್ಲಿ ವೈಜ್ಞಾನಿಕ ಸಮೀಕ್ಷೆ ನಡೆಸಬೇಕು ಎಂದು ಮಾರ್ಚ್ 11 ರಂದು ಮಧ್ಯಪ್ರದೇಶ ಹೈಕೋರ್ಟ್ ಆದೇಶಿಸಿತ್ತು.

          ಮಧ್ಯಯುಗದ ಈ ಸ್ಮಾರಕವು ವಾಗ್ದೇವಿಯ ದೇಗುಲ ಎಂದು ಹಿಂದೂಗಳು ನಂಬಿದರೆ, ಮುಸಲ್ಮಾನರು ಇದನ್ನು ಕಮಲ್ ಮೌಲಾ ಮಸೀದಿ ಎಂದು ಕರೆಯುತ್ತಾರೆ. ಸಂಕೀರ್ಣದಲ್ಲಿ ಪ್ರತಿ ಮಂಗಳವಾರ ಹಿಂದೂಗಳು ಪೂಜೆ ಸಲ್ಲಿಸಲು , ಪ್ರತಿ ಶುಕ್ರವಾರ ಮುಸ್ಲಿಂರು ನಮಾಜ್ ಮಾಡಲು 2003ರ ಏಪ್ರಿಲ್ 7 ರಂದು ಪುರಾತತ್ವ ಇಲಾಖೆ ಆದೇಶಿಸಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries