ನವದೆಹಲಿ: ರೈತರ ಪ್ರತಿಭಟನೆಯಿಂದಾಗಿ ಬುಧವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು ಎಂದು ಪೊಲೀಸರು ಹೇಳಿದರು.
ನವದೆಹಲಿ: ರೈತರ ಪ್ರತಿಭಟನೆಯಿಂದಾಗಿ ಬುಧವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು ಎಂದು ಪೊಲೀಸರು ಹೇಳಿದರು.
ವರದಿಗಳ ಪ್ರಕಾರ, ಬೆಳಿಗ್ಗೆಯಿಂದಲೇ ದೆಹಲಿ-ಹರಿಯಾಣ ಮಾರ್ಗದ ಸಿಂಘು ಗಡಿಯಲ್ಲಿ ಭಾರಿ ವಾಹನ ದಟ್ಟಣೆ ಉಂಟಾಗಿತ್ತು.
ಟಿಕ್ರಿ, ಸಿಂಘು ಮತ್ತು ಗಾಜಿಪುರ ಗಡಿಗಳು, ರೈಲು ಹಾಗೂ ಮೆಟ್ರೊ ನಿಲ್ದಾಣಗಳಲ್ಲಿ ಭಾರಿ ನಿಗಾ ವಹಿಸಲಾಗಿದೆ. ಎಲ್ಲಾ ಗಡಿಗಳಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಗಡಿ ಅಥವಾ ರಸ್ತೆಯನ್ನು ಮುಚ್ಚಿಲ್ಲ. ಬದಲಾಗಿ ವಾಹನ ತಪಾಸಣೆ ನಡೆಸಲಾಗುತ್ತಿದೆ ಎಂದು ಹೇಳಿದರು.
ದೆಹಲಿಯಲ್ಲಿ ಈಗಾಗಲೇ ಸೆಕ್ಷನ್ 144 ಜಾರಿ ಮಾಡಲಾಗಿದೆ. ಜನರು ಗುಂಪುಗೂಡಲು ಅವಕಾಶ ನೀಡುತ್ತಿಲ್ಲ ಎಂದು ಅಧಿಕಾರಿಯೊಬ್ಬರು ಹೇಳಿದರು.
ರೈತರು ಬುಧವಾರ ರಾಷ್ಟ್ರ ರಾಜಧಾನಿ ತಲುಪಬೇಕು ಎಂದು ಕಿಸಾನ್ ಮಜ್ದೂರ್ ಮೋರ್ಚಾ ಮತ್ತು ಸಂಯುಕ್ತ ಕಿಸಾನ್ ಮೋರ್ಚಾ ಭಾನುವಾರ ಕರೆ ನೀಡಿದ್ದವು.