ಕಾಸರಗೋಡು: ಮಂಗಳೂರಿನಿಂದ ಕಣ್ಣೂರಿಗೆ ತೆರಳುತ್ತಿದ್ದ ಮೆಹಬೂಬ್ ಬಸ್ ಪಾದಚಾರಿ ಮಾರ್ಗದಲ್ಲಿ ನಿಯಂತ್ರಣ ತಪ್ಪಿ ಚಾಲಕ ಸಾವನ್ನಪ್ಪಿದ ಘಟನೆ ನಡೆದಿದೆ.
ಪೆರಿಯ ಸನಿಹ ಚಾಲಿಂಗಾಲ್ ಹೆದ್ದಾರಿಯಲ್ಲಿ ಖಾಸಗಿ ಬಸ್ ಮಗುಚಿಬಿದ್ದು ಬಸ್ಸಿನ ಚಾಲಕ ಮೃತಪಟ್ಟಿದ್ದು, ವಿದ್ಯಾರ್ಥಿಗಳು ಸೇರಿದಂತೆ ಹಲವು ಮಂದಿ ಗಾಯಗೊಂಡಿದ್ದಾರೆ. ಮಧೂರು ರಾಮನಗರ ಮೂಲದ ಚೇತನ್ ಕುಮಾರ್ (37) ಮೃತಪಟ್ಟವರು.ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಇಪ್ಪತ್ತು ಜನರು ಗಾಯಗೊಂಡಿದ್ದಾರೆ. ಅವರಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ.ಇದರಿಂದ ಈ ಭಾಗದಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತು. ಬಸ್ಸಿನಲ್ಲಿದ್ದ ಎಲ್ಲರನ್ನೂ ಇಲ್ಲಿಂದ ಹೊರತೆಗೆದ ಬಳಿಕ ಅಗ್ನಿಶಾಮಕ ದಳ ತಂದ ಕ್ರೇನ್ ಬಳಸಿ ಬಸ್ ಅನ್ನು ರಸ್ತೆ ಬದಿಗೆ ಸ್ಥಳಾಂತರಿಸಿತು.