ಕಾಸರಗೋಡು: ಲೋಕಸಭಾ ಚುನಾವಣೆಗೆ ದಿನಾಂಕ ನಿಗದಿಯಾಗುತ್ತಿದ್ದಂತೆ ಕಾಸರಗೋಡು ಜಿಲ್ಲೆಯಲ್ಲಿ ಚುನಾವಣಾ ಪ್ರಕ್ರಿಯೆ ಮತ್ತಷ್ಟು ಚುರುಕುಪಡೆದುಕೊಳ್ಳಲಾರಂಭಿಸಿದೆ. ಜಿಲ್ಲಾ ಚುನಾವಣಾಧಿಕಾರಿ ಕೆ. ಇನ್‍ಬಾಶೇಖರ್ ನೇತೃತ್ವದಲ್ಲಿ ಜಿಲ್ಲೆಯಲ್ಲಿ ತಿಂಗಳುಗಳ ಹಿಂದೆಯೇ ಚುನಾವಣಾ ಪ್ರಕ್ರಿಯೆ ಆರಂಭಿಸಲಾಗಿದೆ.
ಮಾಧ್ಯಮದವರಿಗೆ ವಿಶೇಷ ತರಬೇತಿ ಸೇರಿದಂತೆ ಹಲವಾರ ತರಗತಿ, ವಿಶೇಷ ಸಭೆಗಳನ್ನೂ ಆಯೋಜಿಸಲಾಗಿದ್ದು, ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ಮತ್ತು ವೆಚ್ಚದ ಮಾಹಿತಿಯನ್ನು ಪತ್ತೆಹಚ್ಚಲು ಫ್ಲೈಯಿಂಗ್ ಸ್ಕ್ವಾಡ್ ಕಾರ್ಯಾಚರಣೆಯನ್ನೂ ಚುರುಕುಗೊಳಿಸಲಾಗಿದೆ. ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಪಾವತಿಸಿದ ಸುದ್ದಿಗಳನ್ನು ಮೇಲ್ವಿಚಾರಣೆ ಮಾಡಲು ಮಾಧ್ಯಮ ಮೇಲ್ವಿಚಾರಣಾ ವ್ಯವಸ್ಥೆಗಳನ್ನು ಸಹ ಬಲಪಡಿಸಲಾಗಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಾರ್ವಜನಿಕ ದೂರುಗಳಿಗಾಗಿ ವಿಶೇಷ ಕಂಟ್ರೋಲ್ ರೂಮ್ ತೆರೆಯಲಾಗಿದೆ.
ಮತ ಚಲಾವಣೆಗೆ ಗುರುತಿನ ಚೀಟಿ:
ಮತಗಟ್ಟೆಯಲ್ಲಿ ಮತ ಚಲಾವಣೆ ಸಂದರ್ಭ ಚುನಾವಣಾ ಗುರುತಿನ ಚೀಟಿ ಅಲ್ಲದೆ, ಆಧಾರ್ ಕಾರ್ಡ್, ಉದ್ಯೋಗ ಕಾರ್ಡ್, ಬ್ಯಾಂಕ್ ಅಥವಾ ಪೆÇೀಸ್ಟ್ ಆಫೀಸ್ ನೀಡಿದ ಭಾವಚಿತ್ರವಿರುವ ಪಾಸ್‍ಬುಕ್, ಕೇಂದ್ರ ಕಾರ್ಮಿಕ ಸಚಿವಾಲಯವು ಅನುಮೋದಿಸಿದ ಆರೋಗ್ಯ ವಿಮೆ ಸ್ಮಾರ್ಟ್ ಕಾರ್ಡ್, ಚಾಲನಾ ಪರವಾನಗಿ, ಪ್ಯಾನ್ ಕಾರ್ಡ್, ಏಕ ಅಧಿಕೃತ ಸ್ಮಾರ್ಟ್ ಕಾರ್ಡ್, ಭಾರತೀಯ ಪಾಸ್ಪೋರ್ಟ್, ಭಾವಚಿತ್ರ ಹೊಂದಿದ ಪಿಂಚಣಿ ದಾಖಲೆ, ಸರ್ಕಾರ, ಕೇಂದ್ರ ಸರ್ಕಾರ, ಪಿಎಸ್‍ಯುಐ, ಪಬ್ಲಿಕ್ ಲಿಮಿಟೆಡ್ ಕಂಪನಿ ಸೇವಾ ಗುರುತಿನ ಚೀಟಿ, ಎಂಪಿ, ಎಂಎಲ್‍ಎ, ಎಂಎಲ್‍ಸಿ ಅಧಿಕೃತ ಗುರುತಿನ ದಾಖಲೆ, ಕೇಂದ್ರ ಸಾಮಾಜಿಕ ನ್ಯಾಯ ಇಲಾಖೆಯಿಂದ ಅನುಮೋದಿಸಲಾದ ಕಾರ್ಡ್‍ಗಳನ್ನು ತೋರಿಸಿ ಮತ ಚಲಾಯಿಸಬಹುದಾಗಿದೆ.