ಮಂಜೇಶ್ವರ: ಮಂಜೇಶ್ವರ ಬ್ಲಾಕ್ ಪಂಚಾಯತಿ ವತಿಯಿಂದ ರೂ.10 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಮೆಟ್ರೋ-ಕುಚ್ಚಿಕ್ಕಾಡ್ ಕಾಂಕ್ರೀಟ್ ರಸ್ತೆಯನ್ನು ಬ್ಲಾಕ್ ಪಂಚಾಯತಿ ಉಪಾಧ್ಯಕ್ಷ ಪಿ.ಕೆ.ಮುಹಮ್ಮದ್ ಹನೀಫ್ ಇತ್ತೀಚೆಗೆ ಉದ್ಘಾಟಿಸಿದರು. ಬ್ಲಾಕ್ ಪಂಚಾಯಿತಿ ಸದಸ್ಯೆ ಸಫಾ ಫಾರೂಕ್ ಅಧ್ಯಕ್ಷತೆ ವಹಿಸಿದ್ದರು. ವಾರ್ಡ್ ಸದಸ್ಯ ಲಕ್ಷ್ಮಣ್ ಕುಚ್ಚಿಕ್ಕಾಡ್ ಹಾಗೂ ಸ್ಥಳೀಯರು ಭಾಗವಹಿಸಿದ್ದರು.