ನವದೆಹಲಿ: ಕಚ್ಚತೀವು ದ್ವೀಪವನ್ನು ನಿರ್ದಯವಾಗಿ ಶ್ರೀಲಂಕಾಗೆ ಬಿಟ್ಟುಕೊಟ್ಟಿರುವ ಕಾಂಗ್ರೆಸ್ ನಂಬಿಕೆಗೆ ಅರ್ಹವಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದರು.
ನವದೆಹಲಿ: ಕಚ್ಚತೀವು ದ್ವೀಪವನ್ನು ನಿರ್ದಯವಾಗಿ ಶ್ರೀಲಂಕಾಗೆ ಬಿಟ್ಟುಕೊಟ್ಟಿರುವ ಕಾಂಗ್ರೆಸ್ ನಂಬಿಕೆಗೆ ಅರ್ಹವಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದರು.
'ಭಾರತದ ಏಕತೆ, ಸಮಗ್ರತೆ ಮತ್ತು ಹಿತಾಸಕ್ತಿಗಳನ್ನು ದುರ್ಬಲಗೊಳಿಸಿರುವುದೇ ಕಾಂಗ್ರೆಸ್‌ನ 75 ವರ್ಷದ ಸಾಧನೆ' ಎಂದರು.
ಮೋದಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಕೆ.ಸೆಲ್ವಪೆರುಂತಗೈ, 'ಮೊದಲು ಚೀನಾ ಗಡಿಯಲ್ಲಿ ಏನಾಗುತ್ತಿದೆ ಎಂದು ಪ್ರಧಾನಿ ಅವರು ಹೇಳಬೇಕು. ಅರುಣಾಚಲ ಪ್ರದೇಶ, ಲಡಾಖ್‌ನಲ್ಲಿ ಎಷ್ಟು ಚದರ ಕಿಲೋಮೀಟರ್ ಪ್ರದೇಶವನ್ನು ಚೀನಾ ವಶಪಡಿಸಿಕೊಂಡಿದೆ? ಕಳೆದ 10 ವರ್ಷಗಳಲ್ಲಿ ಅವರ ಸರ್ಕಾರ ಏನು ಮಾಡಿದೆ ಎಂಬುದರ ಬಗ್ಗೆ ಶ್ವೇತಪತ್ರ ಹೊರಡಿಸಲಿ' ಎಂದರು.