ನಾಗ್ಪುರ: ಪ್ರಕರಣ ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾಗಿದ್ದರಿಂದ ನಕ್ಸಲ್ ನಂಟು ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಜಿ. ಎನ್. ಸಾಯಿಬಾಬಾ ಅವರನ್ನು ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠ ಮಂಗಳವಾರ ಖುಲಾಸೆಗೊಳಿಸಿದೆ.

ಇದೇ ವೇಳೆ ಸಾಯಿಬಾಬಾ ಅವರಿಗೆ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನೂ ನ್ಯಾಯಾಲಯ ರದ್ದುಗೊಳಿಸಿದೆ.
ನ್ಯಾಯಮೂರ್ತಿಗಳಾದ ವಿನಯ್ ಜೋಶಿ ಮತ್ತು ವಾಲ್ಮೀಕಿ ಎಸ್‌ಎ ಮೆನೇಜಸ್ ಅವರಿದ್ದ ವಿಭಾಗೀಯ ಪೀಠವು ಪ್ರಕರಣದಲ್ಲಿ ಇತರ ಐವರು ಆರೋಪಿಗಳನ್ನು ಖುಲಾಸೆಗೊಳಿಸಿದೆ.
'ಆರೋಪಿಗಳ ವಿರುದ್ಧದ ಪ್ರಕರಣವನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ' ಎಂದು ಹೈಕೋರ್ಟ್ ಹೇಳಿದೆ.