ಅಯೋಧ್ಯೆ: ರಾಮಮಂದಿರಕ್ಕೆ ದೈನಂದಿನ ಸರಾಸರಿ ಒಂದರಿಂದ ಒಂದೂವರೆ ಲಕ್ಷ ಜನ ಭಕ್ತರು ಭೇಟಿ ನೀಡುತ್ತಿದ್ದಾರೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಟ್ರಸ್ಟ್ ತಿಳಿಸಿದೆ.
ಅಯೋಧ್ಯೆ: ರಾಮಮಂದಿರಕ್ಕೆ ದೈನಂದಿನ ಸರಾಸರಿ ಒಂದರಿಂದ ಒಂದೂವರೆ ಲಕ್ಷ ಜನ ಭಕ್ತರು ಭೇಟಿ ನೀಡುತ್ತಿದ್ದಾರೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಟ್ರಸ್ಟ್ ತಿಳಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಟ್ರಸ್ಟ್, 60ರಿಂದ 70 ನಿಮಿಷದೊಳಗೆ ಶ್ರೀರಾಮ ದೇವರ ದರ್ಶನ ಮಾಡಲು ಭಕ್ತರ ಅನುಕೂಲಕ್ಕಾಗಿ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಮಂದಿರಕ್ಕೆ ಬರುವಾಗ ಹೂವು, ಹಾರ, ಪ್ರಸಾದ ಇತ್ಯಾದಿಗಳನ್ನು ತರದಂತೆ ಮನವಿ ಮಾಡಲಾಗಿದೆ. ದರ್ಶನ ಟಿಕೆಟ್ ಅನ್ನು ಶ್ರೀರಾಮ ಜನ್ಮಭೂಮಿ ತೀರ್ಥ ಟ್ರಸ್ಟ್ ವೆಬ್‌ಸೈಟ್‌ನಿಂದ ಪಡೆಯಬಹುದಾಗಿದೆ. ಪ್ರವೇಶ ಸಂಪೂರ್ಣ ಉಚಿತವಾಗಿದೆ.
ನಿರ್ದಿಷ್ಟ ಶುಲ್ಕ ಪಾವತಿಸಿ ಅಥವಾ ವಿಶೇಷ ಪಾಸ್ ಮೂಲಕ ವಿಶೇಷ ದರ್ಶನಕ್ಕೆ ಯಾವುದೇ ವ್ಯವಸ್ಥೆ ಇರುವುದಿಲ್ಲ ಎಂದು ಹೇಳಿದೆ.
ವರ್ಷಾರಂಭದಲ್ಲಿ ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ನೆರವೇರಿತ್ತು.