ಬಿಜಾಪುರ: ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಇಂದು (ಬುಧವಾರ) ಬೆಳಿಗ್ಗೆ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಆರು ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಛತ್ತೀಸಗಢದಲ್ಲಿ ಎನ್‌ಕೌಂಟರ್: ಆರು ನಕ್ಸಲರ ಹತ್ಯೆ
0
ಮಾರ್ಚ್ 27, 2024
Tags
ಬಿಜಾಪುರ: ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಇಂದು (ಬುಧವಾರ) ಬೆಳಿಗ್ಗೆ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಆರು ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಿಜಾಪುರ ಜಿಲ್ಲೆಯ ಚಿಕುರ್ಬಟ್ಟಿ - ಪುಸ್ಬಾಕ ಸಮೀಪದ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ನಕಲ್ಸರ ನಡುವೆ ಗುಂಡಿನ ಚಕಮಕಿ ನಡೆದಿದೆ.
ರಾಜ್ಯ ಪೊಲೀಸ್‌ನ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಮತ್ತು ಸಿಆರ್‌ಪಿಎಫ್‌ನ ಮುಖ್ಯ ಘಟಕ `ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್' (ಕೋಬ್ರಾ) ಸಿಬ್ಬಂದಿ ಈ ಪ್ರದೇಶದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಅಧಿಕಾರಿಗಳು ತಿಳಿಸಿದ್ದಾರೆ.
ಜನವರಿಯಲ್ಲಿ ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳಾ ನಕ್ಸಲರು ಸೇರಿದಂತೆ ಮೂವರು ನಕ್ಸಲರು ಮೃತಪಟ್ಟಿದ್ದರು.