ಹೈದರಾಬಾದ್: ಸಿಕಂದರಾಬಾದ್‌ನ ಉಜ್ಜಯಿನಿ ಮಹಾಕಾಳಿ ದೇವಸ್ಥಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು( ಮಂಗಳವಾರ) ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಹೈದರಾಬಾದ್: ಸಿಕಂದರಾಬಾದ್‌ನ ಉಜ್ಜಯಿನಿ ಮಹಾಕಾಳಿ ದೇವಸ್ಥಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು( ಮಂಗಳವಾರ) ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ದೇವಾಲಯಕ್ಕೆ ಭೇಟಿ ನೀಡಿದ ಫೋಟೊಗಳನ್ನು ಹಂಚಿಕೊಂಡಿದ್ದಾರೆ.
'ದೇಶದ ಜನರ ಯೋಗಕ್ಷೇಮ, ಉತ್ತಮ ಆರೋಗ್ಯ ಹಾಗೂ ಸಮೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿದ್ದೇನೆ ಎಂದು ಪ್ರಧಾನಿ ಮೋದಿ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ. ದೇವಾಲಯದ ಅರ್ಚಕರು ಮೋದಿಯವರಿಗೆ ದೇವಿಯ ಫೋಟೊವನ್ನು ಉಡುಗೊರೆಯಾಗಿ ನೀಡಿದರು.
ನಂತರ ಸಂಗಾರೆಡ್ಡಿ ಜಿಲ್ಲೆಯಲ್ಲಿ ₹7,200 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಚಾಲನೆ ನೀಡಿದರು ಹಾಗೂ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು.