ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಅನ್ನು ಆರ್ಥಿಕವಾಗಿ ದುರ್ಬಲಗೊಳಿಸಿದ್ದಾರೆ ಎಂದು ಆರೋಪಿಸಿರುವ ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, 'ಪಕ್ಷದ ಬ್ಯಾಂಕ್ ಖಾತೆ'ಗಳನ್ನು ಬಳಸಲು ಅವಕಾಶ ನೀಡಿದರೆ, ಚುನಾವಣಾ ಕಣದಲ್ಲಿ ಸಮಾನ ಸ್ಪರ್ಧೆ ಒಡ್ಡಬಹುದು ಎಂದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,'ಕಾಂಗ್ರೆಸ್ ಖಾತೆಯಲ್ಲಿದ್ದ ಹಣವನ್ನು ಒತ್ತಾಯ ಪೂರ್ವಕವಾಗಿ ಕಿತ್ತುಕೊಳ್ಳಲಾಗಿದೆ. ಇದು ಪ್ರಧಾನಿ ನರೇಂದ್ರ ಮೋದಿಯವರು ಕಾಂಗ್ರೆಸ್ ಅನ್ನು ಆರ್ಥಿಕವಾಗಿ ದುರ್ಬಲಗೊಳಿಸಲು ಮಾಡುತ್ತಿರುವ ವ್ಯವಸ್ಥಿತ ಪಿತೂರಿಯಾಗಿದೆ. ಈ ಸವಾಲುಗಳ ನಡುವೆಯೂ ನಮ್ಮ ಅಭಿಯಾನವನ್ನು ಉತ್ತಮವಾಗಿ ನಡೆಸಲು ನಮ್ಮ ಕೈಲಾದಷ್ಟು ಮಾಡುತ್ತಿದ್ದೇವೆ' ಎಂದರು.
ಆದಾಯ ತೆರಿಗೆ ರಿಟರ್ನ್ ಸಮಸ್ಯೆಯಿಂದಾಗಿ ಪಕ್ಷದ ಖಾತೆಗಳನ್ನು ತಡೆಹಿಡಿದ ವಿಷಯವಾಗಿ ಮಾತನಾಡಿದ ರಾಹುಲ್ ಗಾಂಧಿ, 'ಬ್ಯಾಂಕ್ ಖಾತೆ ತಡೆದ ಕಾರಣ ನಾವು ಯಾವುದೇ ಪ್ರಚಾರ ಕಾರ್ಯವನ್ನು ಮಾಡಲಾಗುತ್ತಿಲ್ಲ. ಚುನಾವಣೆಯಲ್ಲಿ ಹೋರಾಡುವ ನಮ್ಮ ಸಾಮರ್ಥ್ಯವೂ ಕುಂಠಿತವಾಗಿದೆ. ಕಾಂಗ್ರೆಸ್ ಖಾತೆಗಳನ್ನು ತಡೆಯುವುದು ಎಂದರೆ ಭಾರತದ ಪ್ರಜಾಪ್ರಭುತ್ವವನ್ನು ತಡೆದಂತೆ. ನಿಜವಾಗಿ ಭಾರತದಲ್ಲಿ ಇಂದಿನ ದಿನಗಳಲ್ಲಿ ಪ್ರಜಾಪ್ರಭುತ್ವ ಎನ್ನುವುದೇ ಇಲ್ಲದಂತಾಗಿದೆ. ಭಾರತ ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ದೇಶ ಎನ್ನುವುದು ಸುಳ್ಳು ಎಂದರು.
ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳು ನಡೆಯಬೇಕಾದರೆ ನಮ್ಮ ಪಕ್ಷದ ಬ್ಯಾಂಕ್ ಖಾತೆಗಳ ಮೇಲಿನ ನಿರ್ಬಂಧವನ್ನು ತೆಗೆಯಬೇಕು ಎಂದು ಚುನಾವಣಾ ಆಯೋಗಕ್ಕೆ ಮನವಿ ಮಾಡುತ್ತೇವೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.