ನವದೆಹಲಿ: ದಾರಿ ತಪ್ಪಿಸುವ ಜಾಹೀರಾತು ನೀಡಿದ್ದ ಪತಂಜಲಿ ಆಯುರ್ವೇದ ಕಂಪನಿ, ಬೇಷರತ್ ಕ್ಷಮೆ ಕೋರಿ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ.
ಈ ಬಗ್ಗೆ ಎಎನ್‌ಐ ಸುದ್ದಿ ಸಂಸ್ಥೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.
ನವದೆಹಲಿ: ದಾರಿ ತಪ್ಪಿಸುವ ಜಾಹೀರಾತು ನೀಡಿದ್ದ ಪತಂಜಲಿ ಆಯುರ್ವೇದ ಕಂಪನಿ, ಬೇಷರತ್ ಕ್ಷಮೆ ಕೋರಿ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ.
ಈ ಬಗ್ಗೆ ಎಎನ್‌ಐ ಸುದ್ದಿ ಸಂಸ್ಥೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.
ಭವಿಷ್ಯದಲ್ಲಿ ಈ ಜಾಹಿರಾತುಗಳನ್ನು ಪ್ರಕಟಿಸುವುದಿಲ್ಲ.
ಈ ಪ್ರಕರಣ ಸಂಬಂಧ ನೀಡಿಲಾಗಿದ್ದ ನೋಟಿಸ್‌ಗೆ ಉತ್ತರಿಸದಿದ್ದರಿಂದ ಗರಂ ಆಗಿದ್ದ ಸುಪ್ರೀಂ ಕೋರ್ಟ್, ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿ, ಖುದ್ದು ಹಾಜರಿರಬೇಕು ಎಂದು ಬಾಬಾ ರಾಮ್‌ದೇವ್ ಹಾಗೂ ಬಾಲಕೃಷ್ಣ ಅವರಿಗೆ ಮಂಗಳವಾರ ಸೂಚಿಸಿತ್ತು.
ಇದರ ಬೆನ್ನಲ್ಲೇ ಬೇಷರತ್ ಕ್ಷಮೆ ಯಾಚಿಸಿ ಪತಂಜಲಿ ಸಂಸ್ಥೆಯು ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ.