ಇಂಫಾಲ್: ಭಾರತೀಯ ಸೇನೆಯ ಕಿರಿಯ ನಿಯೋಜಿತ ಅಧಿಕಾರಿ (ಜೆಸಿಒ)ಯೊಬ್ಬರನ್ನು ಮಣಿಪುರದ ಥೌಬಾಲ್ ಜಿಲ್ಲೆಯ ಅವರ ನಿವಾಸದಿಂದ ಅಪಹರಣ ಮಾಡಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದರು.
ಇಂಫಾಲ್: ಭಾರತೀಯ ಸೇನೆಯ ಕಿರಿಯ ನಿಯೋಜಿತ ಅಧಿಕಾರಿ (ಜೆಸಿಒ)ಯೊಬ್ಬರನ್ನು ಮಣಿಪುರದ ಥೌಬಾಲ್ ಜಿಲ್ಲೆಯ ಅವರ ನಿವಾಸದಿಂದ ಅಪಹರಣ ಮಾಡಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದರು.
ಜೆಸಿಒ ಕೋನ್ಸಮ್ ಖೇದಾ ಸಿಂಗ್ ಅವರು ರಜೆಯ ಮೇಲೆ ಮನೆಗೆ ತೆರಳಿದ್ದರು. ಈ ವೇಳೆ ಅವರ ಮನೆಗೆ ನುಗ್ಗಿದ ದುಷ್ಕರ್ಮಿಗಳು ಅವರನ್ನು ಅಪಹರಣ ಮಾಡಿದ್ದಾರೆ.
ಜೆಸಿಒ ರಕ್ಷಣೆಗಾಗಿ ಭದ್ರತಾ ಪಡೆಯು ಶೋಧ ಕಾರ್ಯವನ್ನು ಆರಂಭಿಸಿದೆ. ರಾಷ್ಟ್ರೀಯ ಹೆದ್ದಾರಿ 102ರಲ್ಲಿ ಎಲ್ಲಾ ವಾಹನಗಳನ್ನು ತಪಾಸಣೆ ನಡೆಸಲಾಗುತ್ತಿದೆ.
ಮಣಿಪುರದಲ್ಲಿ ಜನಾಂಗೀಯ ಸಂಘರ್ಷ ಆರಂಭವಾದ ನಂತರ ಯೋಧರನ್ನು ಅಪಹರಣ ಮಾಡುತ್ತಿರುವ ನಾಲ್ಕನೇ ಪ್ರಕರಣ ಇದಾಗಿದೆ.