ಕೋಲ್ಕತ್ತಾ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಆಘಾತ ನೀಡಲು ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನಾಗಿ ಟೀಂ ಇಂಡಿಯಾದ ಮಾಜಿ ಆಟಗಾರ ಯೂಸುಫ್ ಪಠಾಣ್ ಅವರನ್ನು ಕಣಕ್ಕಿಳಿಸಿದೆ. ಆ ಮೂಲಕ ಬಿಜೆಪಿಗೆ ಸೆಡ್ಡುಹೊಡೆಯಲು ನಿರ್ಧರಿಸಿದೆ.
ಮುಂಬರುವ ಲೋಕಸಭೆ ಚುನಾವಣೆ 2024 ಕ್ಕೆ ತೃಣಮೂಲ ಕಾಂಗ್ರೆಸ್ ಎಲ್ಲಾ 42 ಲೋಕಸಭಾ ಸ್ಥಾನಗಳಿಗೆ ಹೆಸರುಗಳನ್ನು ಭಾನುವಾರ ಪ್ರಕಟಿಸಿದೆ.
ಬ್ರೀಗ್ರೇಡ್ ಗ್ರೌಂಡ್ ಮಾರ್ಚ್‌ನಲ್ಲಿ ಡೈಮಂಡ್ ಹಾರ್ಬರ್ ಕ್ಷೇತ್ರದಿಂದ ಸ್ಪರ್ಧಿಸಲಿರುವ ಅಭಿಷೇಕ್ ಬ್ಯಾನರ್ಜಿ ಅವರು ಹೆಸರುಗಳನ್ನು ಘೋಷಿಸಿದರು.
ಟೀಂ ಇಂಡಿಯಾ, ರಣಜಿ, ಐಪಿಎಲ್ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಪರ ಐಪಿಎಲ್ ಕ್ರಿಕೆಟ್ ಆಡಿದ ಗುಜರಾತ್ ಬರೋಡ ಮೂಲದ ಆಟಗಾರ ಯೂಸುಫ್ ಪಠಾಣ್ ಅವರನ್ನು ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಬಹರಂಪುರದಿಂದ ಸ್ಪರ್ಧಿಸಲಿದ್ದಾರೆ. ತೃಣಮೂಲ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಧೀರ್ ರಂಜನ್ ಚೌಧರಿ ವಿರುದ್ಧ ಯೂಸುಫ್ ಪಠಾಣ್ ಸ್ಪರ್ಧಿಸಲಿದ್ದಾರೆ.
ತೃಣಮೂಲ ಕಾಂಗ್ರೆಸ್ ಪಟ್ಟಿಯಲ್ಲಿ ಹಾಲಿ ಸಂಸದ ನಟ ನುಸ್ರತ್ ಜಹಾನ್ (ಬಸಿರ್‌ಹತ್ — ಸಂದೇಶ್‌ಖಾಲಿ ಕ್ಷೇತ್ರ) ಅವರನ್ನು 2024 ರ ಪಟ್ಟಿಯಿಂದ ಕೈಬಿಡಲಾಗಿದೆ. ಇತ್ತೀಚೆಗಷ್ಟೇ ಟೀಂ ಇಂಡಿಯಾ ಬೌಲರ್ ಮೊಹಮ್ಮದ್ ಶಮಿ ಅವರನ್ನು ಬಸಿರ್ಹಾತ್ ಲೋಕಸಭೆ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹರಡಿತ್ತು.
ಪಠಾಣ್ ಟಿಎಂಸಿ ಸೇರಿದರೆ, ಇಲ್ಲಿನ ಅಲ್ಪಸಂಖ್ಯಾತರ ಮತಗಳನ್ನೂ ಪಡೆಯಲು ಸಾಧ್ಯವಾಗಲಿದೆ ಎನ್ನುವುದನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಲೆಕ್ಕಾಚಾರ ಹಾಕಿಕೊಂಡಿದೆ.
ಯೂಸುಫ್ ಪಠಾಣ್ ಅವರು ಭಾರತ ಪರ 57 ಏಕದಿನ ಮತ್ತು 22 ಟಿ20 ಕ್ರಿಕೆಟ್ ಆಡಿದ್ದಾರೆ.