ನವದೆಹಲಿ: ತಪ್ಪುದಾರಿಗೆಳೆಯುವ ಪತಂಜಲಿ ಜಾಹೀರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಗ ಗುರು ಬಾಬಾ ರಾಮದೇವ್ ಹಾಗೂ ಪತಂಜಲಿ ಆಯುರ್ವೇದ ಕಂಪನಿಯ ಎಂಡಿ ಆಚಾರ್ಯ ಬಾಲಕೃಷ್ಣ ಅವರು ಸುಪ್ರೀಂಕೋರ್ಟ್‌ಗೆ ಸ್ವತಃ ಬಂದು ಹಾಜರಾಗಬೇಕು ಎಂದು ಸುಪ್ರೀಂಕೋರ್ಟ್ ಮಂಗಳವಾರ ತಾಕೀತು ಮಾಡಿದೆ.

ಈ ಇಬ್ಬರೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇವರ ವಿರುದ್ಧ ಏಕೆ ನ್ಯಾಯಾಂಗ ನಿಂಧನೆ ಪ್ರಕರಣ ದಾಖಲಿಸಬಾರದು ಎಂದು ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಹಾಗೂ ಅಹ್ಸಾನುದ್ದೀನ್ ಅಮಾನುಲ್ಲಾ ಅವರ ಪೀಠ ಕೇಳಿದೆ.
ನ್ಯಾಯಾಂಗ ನಿಂಧನೆ ದಾಖಲಿಸುವ ಬಗ್ಗೆ ಬಾಬಾ ರಾಮದೇವ್ ಅವರಿಗೆ ಪೀಠ ಶೋಕಾಸ್ ನೋಟಿಸ್ ಜಾರಿಗೊಳಿಸಿದೆ.
ವಿವಿಧ ಕಾಯಿಲೆಗಳ ಚಿಕಿತ್ಸೆ ಸಂಬಂಧ ಪತಂಜಲಿಯು ತನ್ನ ಉತ್ಪನ್ನಗಳ ಕುರಿತು ಸುಳ್ಳು ಮತ್ತು ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ನೀಡುತ್ತಿದ್ದರೂ ಕೇಂದ್ರ ಸರ್ಕಾರ ನಿಷ್ಕ್ರಿಯವಾಗಿದೆ ಎಂದು ಸುಪ್ರೀಂ ಕೋರ್ಟ್ ಈ ಹಿಂದೆ ತರಾಟೆಗೆ ತೆಗೆದುಕೊಂಡಿತ್ತು.
ಅಲ್ಲದೆ ರಕ್ತದೊತ್ತಡ, ಮಧುಮೇಹ, ಅಸ್ತಮಾ ಮತ್ತು ಇತರ ಕೆಲವು ಕಾಯಿಲೆಗಳಿಗೆ ಸಂಬಂಧಿಸಿದ ಯಾವುದೇ ಜಾಹೀರಾತುಗಳನ್ನು ನೀಡದಂತೆ ಪೀಠವು ಕಂಪನಿ ಮೇಲೆ ನಿರ್ಬಂಧ ವಿಧಿಸಿತ್ತು.
ಭಾರತೀಯ ವೈದ್ಯಕೀಯ ಸಂಘ (ಐಎಂಎ) ಪತಂಜಲಿ ಕಂಪನಿ ವಿರುದ್ಧ ಪ್ರಕರಣ ದಾಖಲಿಸಿದೆ.