HEALTH TIPS

ರಾಜಕೀಯ ಪಕ್ಷಗಳಿಂದ ಆಕ್ಷೇಪ; ಯುಸಿಸಿ ವಿಚಾರ ಸಂಕಿರಣ ರದ್ದುಪಡಿಸಿದ ಸೇನೆ

            ಶ್ರೀನಗರ: ಭಾರತೀಯ ದಂಡ ಸಂಹಿತೆ ಮತ್ತು ಏಕ ರೂಪ ನಾಗರಿಕ ಸಂಹಿತೆ (ಯುಸಿಸಿ) ಕುರಿತು ಜನರಿಗೆ ಅರಿವು ಮೂಡಿಸಲು ಭಾರತೀಯ ಸೇನೆ ಆಯೋಜಿಸಿದ್ದ ವಿಚಾರ ಸಂಕಿರಣವನ್ನು ರಾಜಕೀಯ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ ಬೆನ್ನಲ್ಲೇ ರದ್ದುಪಡಿಸಲಾಗಿದೆ.

              ವಿಚಾರ ಸಂಕಿರಣವನ್ನು ಇದೇ 26ರಂದು ಕಾಶ್ಮೀರ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ನಿಗದಿಪಡಿಸಲಾಗಿತ್ತು.

             ಶುಕ್ರವಾರ ತಡರಾತ್ರಿ ಮಾಧ್ಯಮಗಳಿಗೆ ಆಹ್ವಾನ ಪತ್ರಿಕೆಯನ್ನು ಸೇನೆ ಕಳುಹಿಸಿತ್ತು.

ಸೇನೆ ಆಯೋಜಿಸಿದ್ದ ಈ ಕಾರ್ಯಕ್ರಮಕ್ಕೆ ನ್ಯಾಷನಲ್‌ ಕಾನ್ಫರೆನ್ಸ್‌, ಪಿಡಿಪಿ ಪಕ್ಷಗಳ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಇದಕ್ಕೆ ಲೋಕಸಭಾ ಚುನಾವಣೆ ಮಾದರಿ ನೀತಿ ಸಂಹಿತೆಯು ಅನ್ವಯಿಸುವುದಿಲ್ಲವೇ ಎಂದು ಪ್ರಶ್ನಿಸಿ, ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ ಹಂಚಿಕೊಂಡಿದ್ದರು.

ಇದರ ಬೆನ್ನಲ್ಲೇ, 'ಕಾಶ್ಮೀರ ವಿಶ್ವವಿದ್ಯಾನಿಲಯದಲ್ಲಿ ಮಾರ್ಚ್ 26ರಂದು ಕಾಶ್ಮೀರ ಕಾನೂನು ತಜ್ಞರಿಂದ ಕಾನೂನು ಅರಿವು ಮೂಡಿಸಲು ಆಯೋಜಿಸಿದ್ದ ವಿಚಾರ ಸಂಕಿರಣವನ್ನು ಮಾದರಿ ನೀತಿ ಸಂಹಿತೆ ಜಾರಿಯಿಂದಾಗಿ ರದ್ದುಗೊಳಿಸಲಾಗಿದೆ' ಎಂದು ಶ್ರೀನಗರದ ರಕ್ಷಣಾ ವಕ್ತಾರ ಲೆಫ್ಟಿನೆಂಟ್ ಕರ್ನಲ್ ಮನೋಜ್ ಸಾಹು ಹೇಳಿದ್ದಾರೆ.

                 ಕಾಶ್ಮೀರದಂತಹ ಸೂಕ್ಷ್ಮ ಸ್ಥಳದಲ್ಲಿ, ಏಕರೂಪ ನಾಗರಿಕ ಸಂಹಿತೆಯಂತಹ 'ವಿಭಜಕ' ವಿಷಯದಲ್ಲಿ ಸೇನೆಯ ಒಳಗೊಳ್ಳುವಿಕೆ ಎಷ್ಟು ಸಮಂಜಸ ಎಂದು ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಪ್ರಶ್ನಿಸಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries