ವಯನಾಡು: ಪಶುವೈದ್ಯಕೀಯ ಪದವಿ ವಿದ್ಯಾರ್ಥಿ ಜೆ.ಎಸ್. ಸಿದ್ಧಾರ್ಥನ್ ಅವರ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಕಾಂಗ್ರೆಸ್ ನಾಯಕ, ವಯನಾಡು ಸಂಸದ ರಾಹುಲ್ ಗಾಂಧಿ ಅವರು ಆಗ್ರಹಿಸಿದ್ದಾರೆ.
ವಯನಾಡು: ಪಶುವೈದ್ಯಕೀಯ ಪದವಿ ವಿದ್ಯಾರ್ಥಿ ಜೆ.ಎಸ್. ಸಿದ್ಧಾರ್ಥನ್ ಅವರ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಕಾಂಗ್ರೆಸ್ ನಾಯಕ, ವಯನಾಡು ಸಂಸದ ರಾಹುಲ್ ಗಾಂಧಿ ಅವರು ಆಗ್ರಹಿಸಿದ್ದಾರೆ.
ಸಾವಿಗೆ ಕಾರಣರಾದವರನ್ನು ರಕ್ಷಿಸಲು ಕೇರಳದ ಕಾನೂನು ಜಾರಿ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯದ ಆಡಳಿತ ಪ್ರಯತ್ನಿಸುತ್ತಿವೆ ಎಂದು ಅವರು ಆರೋಪಿಸಿದ್ದಾರೆ.
ಈ ಕುರಿತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಪತ್ರ ಬರೆದಿರುವ ಅವರು, 'ಕೇರಳ ಪಶುವೈದ್ಯಕೀಯ ಮತ್ತು ಪ್ರಾಣಿ ವಿಜ್ಞಾನಗಳ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಿದ್ಧಾರ್ಥನ್‌ನನ್ನು ಹಿಂಸಿಸಿ ಕೊಂದಿರುವ ಘಟನೆ ನಮ್ಮ ಅಂತಃಸಾಕ್ಷಿಯನ್ನು ಕಲಕಿದೆ. ತಪ್ಪಿತಸ್ಥರು ಎಸ್‌ಎಫ್‌ಐನ ಸದಸ್ಯರು. ಪ್ರಕರಣವನ್ನು ಮುಚ್ಚಿಹಾಕಲು ನಡೆಸುತ್ತಿರುವ ಪ್ರಯತ್ನವನ್ನು ನಾನು ಖಂಡಿಸುತ್ತೇನೆ' ಎಂದಿದ್ದಾರೆ.