HEALTH TIPS

ಕಸಾಯಿಖಾನೆ 'ಇಐಎ' ವ್ಯಾಪ್ತಿಯಡಿ ತರಬೇಕಿಲ್ಲ: ಕೇಂದ್ರ

           ವದೆಹಲಿ: ಕಸಾಯಿಖಾನೆ ಮತ್ತು ಮಾಂಸ ಸಂಸ್ಕರಣಾ ಘಟಕಗಳನ್ನು 2006ರ ಪರಿಸರ ಪ್ರಭಾವ ಮೌಲ್ಯಮಾಪನ (ಇಐಎ) ಅಧಿಸೂಚನೆ ವ್ಯಾಪ್ತಿಯಲ್ಲಿ ತರುವ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರವು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗೆ (ಎನ್‌ಜಿಟಿ) ತಿಳಿಸಿದೆ.

              ಕಸಾಯಿಖಾನೆಗಳಿಂದ ಪರಿಸರಕ್ಕೆ ಆಗುವ ಹಾನಿಯನ್ನು ತಡೆಗಟ್ಟಲು ಬೇಕಾದ ಮಾರ್ಗಸೂಚಿಗಳು ಈಗಾಗಲೇ ಜಾರಿಯಲ್ಲಿವೆ ಎಂದು ಸರ್ಕಾರ ಹೇಳಿದೆ.

             ಕಸಾಯಿಖಾನೆಗಳು ಹಾಗೂ ಮಾಂಸ ಸಂಸ್ಕರಣಾ ಘಟಕಗಳನ್ನು ಇಐಎ ವ್ಯಾಪ್ತಿಗೆ ತರಬೇಕೆಂದು ಒತ್ತಾಯಿಸಿ ಪ್ರಾಣಿ ಹಕ್ಕುಗಳ ಹೋರಾಟಗಾರ್ತಿ ಗೌರಿ ಮೌಲೇಖಿ ಎಂಬವರು ಕಳೆದ ವರ್ಷ ಹಸಿರು ನ್ಯಾಯಮಂಡಳಿ ಮೊರೆ ಹೋಗಿದ್ದರು.

                ಕಸಾಯಿಖಾನೆಗಳಲ್ಲಿ ನೀರಿನ ಮಿತಿ ಮೀರಿದ ಬಳಕೆ, ಘನತ್ಯಾಜ್ಯಗಳ ಅಸಮರ್ಪಕ ವಿಲೇವಾರಿಯಿಂದ ಜಲಮೂಲಗಳು ಕಲುಷಿತಗೊಳ್ಳುವುದು ಮತ್ತು ಪ್ರಾಣಿಗಳಿಂದ ಮಾನವನಿಗೆ ಕಾಯಿಲೆಗಳು ಹರಡುವ ಸಾಧ್ಯತೆಯ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದ್ದರು.

               ಕಳೆದ ವರ್ಷ ಆಗಸ್ಟ್‌ನಲ್ಲಿ ರಚಿಸಿದ್ದ ಎಂಟು ಸದಸ್ಯರ ಸಮಿತಿಯು ಸಿದ್ಧಪಡಿಸಿರುವ ವರದಿಯನ್ನು ಆಧರಿಸಿ, ಕೇಂದ್ರ ಪರಿಸರ ಸಚಿವಾಲಯವು ಈಚೆಗೆ ಎನ್‌ಜಿಟಿಗೆ ಪ್ರಮಾಣಪತ್ರ ಸಲ್ಲಿಸಿದೆ.

'ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಕಸಾಯಿಖಾನೆ/ ಮಾಂಸ ಸಂಸ್ಕರಣಾ ಘಟಕಗಳನ್ನು ನಿಯಂತ್ರಿಸಲು ಬೇಕಾದ ಮಾರ್ಗಸೂಚಿಗಳು ಮತ್ತು ಸುರಕ್ಷತಾ ಕ್ರಮಗಳು ಈಗಾಗಲೇ ಜಾರಿಯಲ್ಲಿವೆ. ಆದ್ದರಿಂದ ಇವುಗಳನ್ನು ಇಐಎ ಅಡಿ ತರಬೇಕಾದ ಅವಶ್ಯಕತೆಯಿಲ್ಲ' ಎಂದು ಸಚಿವಾಲಯ ಹೇಳಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries