ಲೇಹ್ : ಲಡಾಖ್‌ಗೆ ರಾಜ್ಯ ಸ್ಥಾನಮಾನಕ್ಕಾಗಿ 21 ದಿನಗಳಿಂದ ಉಪವಾಸ ಮಾಡುತ್ತಿದ್ದ ಹವಾಮಾನ ಹೋರಾಟಗಾರ ಸೋನಮ್ ವಾಂಗ್ಚುಕ್ ತಮ್ಮ ಉಪವಾಸ ಸತ್ಯಾಗ್ರಹವನ್ನು ಅಂತ್ಯ ಮಾಡಿದ್ದಾರೆ ಎಂದು ndtv ವರದಿ ಮಾಡಿದೆ.
ಹಿಮಾಲಯದ ಪರಿಸರದ ರಕ್ಷಣೆಗಾಗಿ ಒತ್ತಾಯಿಸಲು ತಮ್ಮ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿರುವ ಅವರು ತಮ್ಮ ಹೋರಾಟ ಮುಂದುವರೆಯುತ್ತದೆ ಎಂದು ಹೇಳಿದ್ದಾರೆ.