ಕುಂಬಳೆ: ಅಗಲಿದ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ರಿಗೆ ನುಡಿ ನಮನದೊಂದಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ಕುಂಬಳೆಯ ಅನ್ನಪೂರ್ಣ ಸಭಾಭವನದಲ್ಲಿ ಬುಧವಾರ ಬೆಳಗ್ಗೆ ನಡೆಯಿತು. ಕೆಯುಡಬ್ಲ್ಯೂ ಜೆ ಕಾಸರಗೋಡು ಜಿಲ್ಲಾ ಸಮಿತಿ ಹಾಗೂ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ನಡೆದ ಸಂತಾಪ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಕನ್ನಡ ಪತ್ರಕರ್ತರ ಸಂಘದ ಅಧ್ಯಕ್ಷ ರವಿ ನಾಯ್ಕಾಪು ವಹಿಸಿದ್ದರು.
ಹಿರಿಯ ವೈದ್ಯ ಡಾ.ದಿವಾಕರ್ ರೈ,ಹಿರಿಯ ಪತ್ರಕರ್ತ ರಾಧಾಕೃಷ್ಣ ಕೆ.ಉಳಿಯತ್ತಡ್ಕ,ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಎ.ಆರ್.ಸುಬ್ಬಯ್ಯ ಕಟ್ಟೆ,ನಿವೃತ್ತ ಬ್ಯಾಂಕ್ ಅಧಿಕಾರಿ ಜಗನ್ನಾಥ ಶೆಟ್ಟಿ ಕುಂಬಳೆ,ಪತ್ರಕರ್ತರ ರಾಜ್ಯ ಸಮಿತಿ ಸದಸ್ಯ ಆಖಿಲೇμï ನಗುಮುಗಂ ಮೊದಲಾದವರು ನುಡಿ ನಮನ ಸಲ್ಲಿಸಿದರು.ಹಿರಿಯ ಪತ್ರಕರ್ತ ಅಚ್ಚುತ್ತ ಚೇವಾರ್, ಜಯ ಮಣಿಯಂಪಾರೆ, ಅಜಿತ್ ಸ್ವರ್ಗ,ಶ್ರೀಕಾಂತ್ ಕಾಸರಗೋಡು ಮೊದಲಾದವರು ಉಪಸ್ಥಿತರಿದ್ದರು. ಪತ್ರಕರ್ತರ ಸಂಘದ ಕಾರ್ಯದರ್ಶಿ ಗಂಗಾಧರ ಯಾದವ್ ಸ್ವಾಗತಿಸಿ ಪುರುμÉೂೀತ್ತಮ ಪೆರ್ಲ ವಂದಿಸಿದರು.