ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಅವರಿಗೆ ಗಂಭೀರ ಗಾಯವಾಗಿರುವ ಬಗ್ಗೆ ವರದಿಯಾಗಿದೆ.
ಮಮತಾ ಬ್ಯಾನರ್ಜಿ ಅವರ ಹಣೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಟಿಎಂಸಿ ಪಕ್ಷ ಅಧಿಕೃತವಾಗಿ ತಿಳಿಸಿದೆ.
ಟಿಎಂಸಿ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಮತಾ ಬ್ಯಾನರ್ಜಿ ಆಸ್ಪತ್ರೆಯ ಹಾಸಿಗೆ ಮೇಲೆ ಮಲಗಿರುವ ಫೋಟೋ ಹಂಚಿಕೊಂಡಿದ್ದು, ಅವರ ಹಣೆಯ ಮಧ್ಯದಲ್ಲಿ ಆಳವಾದ ಗಾಯವಾಗಿದ್ದು, ರಕ್ತ ಮುಖದ ಮೇಲೆ ಬಿದ್ದಿರುವ ಫೋಟೋಗಳನ್ನು ಹರಿಯಬಿಟ್ಟಿದೆ. ಈ ಕುರಿತು ಇನ್ನೂ ಹೆಚ್ಚಿನ ಮಾಹಿತಿ ತಿಳಿದುಬರಬೇಕಾಗಿದೆ.