ಬದಿಯಡ್ಕ: ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಪುನರ್ ನವೀಕರಣ ಕಾಮಗಾರಿಗಳು ಭರದಿಂದ ಸಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕ್ಷೇತ್ರ ಪದಾಧಿಕಾರಿಗಳು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಜೀರ್ಣೋದ್ಧಾರ ವಿಜ್ಞಾಪನ ಪತ್ರವನ್ನು ಧರ್ಮದರ್ಶಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ನೀಡಿ ಆಶೀರ್ವಾದ ಪಡೆದರು. ಪೂಜ್ಯ ಧರ್ಮಾಧಿಕಾರಿಗಳು ಜೀರ್ಣೋದ್ಧಾರ ಕಾರ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡು ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾನ ಮತ್ತು ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದ ನಡುವಿನ ಅವಿನಾವಭಾವ ಸಂಬಂಧವನ್ನು ಸ್ಮರಿಸಿಕೊಂಡರು.
ಆಡಳಿತ ಮಂಡಳಿಯ ಅಧ್ಯಕ್ಷ ವೆಂಕಟರಮಣ ಭಟ್ ಚಂಬಲ್ತಿಮಾರ್, ಟ್ರಸ್ಟಿ ಮತ್ತು ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಪಿ.ಜಿ. ಜಗನ್ನಾಥ ರೈ, ಕೋಶಾಧಿಕಾರಿ ಸೂರ್ಯನಾರಾಯಣ ಬಿ, ಸೇವಾ ಸಮಿತಿ ಪ್ರಧಾನ ಕಾರ್ಯದರ್ಶಿ ನಿರಂಜನ ರೈ ಪೆರಡಾಲ, ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷ ಪಿ.ಜಿ. ಚಂದ್ರಹಾಸ ರೈ, ಯುವ ಸಮಿತಿ ಕಾರ್ಯದರ್ಶಿ ಭಾಸ್ಕರ ಪಂಜೀತಡ್ಕ, ವೇದಮೂರ್ತಿ ವೆಂಕಟೇಶ್ವರ ಭಟ್ ಪಟ್ಟಾಜೆ, ಲೆಕ್ಕಪರಿಶೋಧಕ ಕುಂಞಣ್ಣ ಬದಿಯಡ್ಕ, ಪ್ರತೀಕ.ಆಳ್ವ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.