ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟಕ್ಕೆ ತಮಿಳುನಾಡು ಕಾರಣ ಎಂದು ಹೇಳಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷವು ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ತಮಿಳುನಾಡು ಜನತೆಯನ್ನು ಅವಮಾನಿಸಿದ್ದಕ್ಕಾಗಿ ಹಾಗೂ ಎರಡು ರಾಜ್ಯಗಳ ನಡುವೆ ಗಲಭೆಗೆ ಪ್ರಚೋದನೆ ನೀಡಿದ್ದಕ್ಕಾಗಿ ಶೋಭಾ ಕರಂದ್ಲಾಜೆ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಡಿಎಂಕೆಯ ಆರ್.ಎಸ್ ಭಾರತಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ಈ ಬಗ್ಗೆ ಡಿಎಂಕೆ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದೆ.