HEALTH TIPS

ಮಾಲೆಗಾಂವ್ ಸ್ಫೋಟ: ಪ್ರಜ್ಞಾ ಠಾಕೂರ್‌ಗೆ ಎನ್‌ಐಎ ವಿಶೇಷ ಕೋರ್ಟ್‌ ವಾರಂಟ್

            ಮುಂಬೈ: ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್ ಅವರಿಗೆ ಎನ್‌ಐಎ ವಿಶೇಷ ಕೋರ್ಟ್‌ ಸೋಮವಾರ ಜಾಮೀನು ಪಡೆಯಬಹುದಾದ ವಾರಂಟ್ ಜಾರಿಗೊಳಿಸಿದೆ.

             2008ರಲ್ಲಿ ನಡೆದಿದ್ದ ಮಾಲೆಗಾಂವ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪದೇ ಪದೇ ಎಚ್ಚರಿಕೆ ನೀಡಿದರೂ ವಿಚಾರಣೆಗೆ ಹಾಜರಾಗದ ಕಾರಣಕ್ಕೆ ಈ ವಾರಂಟ್ ಜಾರಿಗೊಳಿಸಲಾಗಿದೆ.

ಯುಎಪಿಎ ಅಡಿಯಲ್ಲಿ ಪ್ರಜ್ಞಾ ಠಾಕೂರ್‌ ಹಾಗೂ ಇತರೆ ಆರು ಮಂದಿ ಸ್ಫೋಟ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ. ಎನ್‌ಐಎ ನ್ಯಾಯಾಲಯವು ಈಗ ಆರೋಪಿಗಳ ಹೇಳಿಕೆಗಳನ್ನು ಅಪರಾಧ ಪ್ರಕ್ರಿಯಾ ಸಂಹಿತೆಯಡಿ (ಸಿಆರ್‌ಪಿಸಿ) ದಾಖಲಿಸಿಕೊಳ್ಳುತ್ತಿದೆ.

             ವಿಶೇಷ ನ್ಯಾಯಮೂರ್ತಿ ಎ.ಕೆ. ಲಾಹೋಟಿ ಅವರು ಠಾಕೂರ್ ಅವರಿಗೆ ₹10 ಸಾವಿರ ಮೊತ್ತದೊಂದಿಗೆ ವಾರಂಟ್‌ ಜಾರಿಗೊಳಿಸಿದ್ದೇ ಅಲ್ಲದೆ, ಮಾರ್ಚ್ 20ರ ಹೊತ್ತಿಗೆ ವಿಚಾರಣೆಯ ಕುರಿತ ವರದಿಯನ್ನು ಸಲ್ಲಿಸುವಂತೆ ತನಿಖಾ ಸಂಸ್ಥೆಗೆ ಸೂಚಿಸಿತು.

                ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಇದ್ದರೆ ಅಗತ್ಯ ಕ್ರಮ ತೆಗೆದುಕೊಳ್ಳುವುದಾಗಿ ಕಳೆದ ತಿಂಗಳೇ ಪ್ರಜ್ಞಾ ಠಾಕೂರ್ ಅವರಿಗೆ ಕೋರ್ಟ್ ಎಚ್ಚರಿಕೆ ನೀಡಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries